Karnataka Rains: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಜುಲೈ 17ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಮಳೆ
Image Credit source: PTI

Updated on: Jul 13, 2025 | 7:55 AM

ಬೆಂಗಳೂರು, ಜುಲೈ 13: ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ(Rain)ಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಶಿರಾಲಿ, ಹೊನ್ನಾವರ, ಕುಂದಾಪುರ, ಮಂಗಳೂರು, ಗೋಕರ್ಣ, ಕುಮಟಾ, ಮಂಗಳೂರು, ಆಗುಂಬೆ, ಕಾರ್ಕಳ, ಉಡುಪಿ, ಅಂಕೋಲಾ, ಮುಲ್ಕಿ, ಸಿದ್ದಾಪುರ, ಕ್ಯಾಸಲ್​ರಾಕ್, ಕಾರವಾರ, ಮಾಣಿ, ಕೊಟ್ಟಿಗೆಹಾರ, ಕಮ್ಮರಡಿ, ಮೂಡುಬಿದಿರೆ, ಬಂಟವಾಳ, ಪುತ್ತೂರು, ಶಕ್ತಿನಗರ, ಬೆಳ್ತಂಗಡಿ, ಶೃಂಗೇರಿ, ಭಾಗಮಂಡಲ, ಹುಂಚದಕಟ್ಟೆ, ಕಳಸ, ಬಾಳೆಹೊನ್ನೂರು, ಕೊಪ್ಪ, ಸುಳ್ಯ, ಕದ್ರಾ, ಶಿವಮೊಗ್ಗ, ಬನವಾಸಿ, ಧರ್ಮಸ್ಥಳ, ಯಲ್ಲಾಪುರ, ಭದ್ರಾವತಿ, ಎನ್​ಆರ್​ ಪುರ, ಕೃಷ್ಣರಾಜಸಾಗರ, ನಾಪೋಕ್ಲು, ಚನ್ನಗಿರಿ, ಹೊನ್ನಾಳಿ, ಹೊಸದುರ್ಗ, ತಿಪಟೂರು, ಅಜ್ಜಂಪುರ, ಗುಬ್ಬಿ, ಅಥಣಿ, ಸಿಂದಗಿ, ಲೋಂಡಾ, ಕೆಂಭಾವಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಳೆಯಾಗಿದೆ. ಎಚ್​ಎಎಲ್​​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಬಹುತೇಕ ಕಡೆ ಇಂದಿನಿಂದ ಮುಂಗಾರು ದುರ್ಬಲ, ಕರಾವಳಿಯಲ್ಲಿ ಮಳೆ ಸಾಧ್ಯತೆ

ಹೊನ್ನಾವರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us