AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕೆಲವೆಡೆ ಸಾಧಾರಣ ಮಳೆ, ತಾಪಮಾನ ಹೆಚ್ಚಳ

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಒಣಹವೆ ಇರಲಿದ್ದು, ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್​, ಬಾಗಲಕೋಟೆಯಲ್ಲಿ ಬಿಸಿಲಿರಲಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Karnataka Rains: ಕರ್ನಾಟಕದ ಕೆಲವೆಡೆ ಸಾಧಾರಣ ಮಳೆ, ತಾಪಮಾನ ಹೆಚ್ಚಳ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Sep 16, 2024 | 7:36 AM

Share

ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗುತ್ತಿದ್ದು, ಕ್ರಮೇಣವಾಗಿ ಬಿಸಿಲಿನ ಝಳ ಹೆಚ್ಚಾಗತೊಡಗಿದೆ. ಮೊದಲೆಲ್ಲಾ ಮಳೆಗಾಲ ನಿಂತ ಬಳಿಕ ಸ್ವಲ್ಪ ದಿನಗಳ ಕಾಲ ತಂಪಾದ ವಾತಾವರಣವಿರುತ್ತಿತ್ತು ಆದರೆ ಈಗ ಮಳೆ ಕಡಿಮೆಯಾಗುತ್ತಿದ್ದಂತೆ ತಾಪಮಾನ ಹೆಚ್ಚಳವಾಗುತ್ತಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್​, ಬಾಗಲಕೋಟೆಯಲ್ಲಿ ಬಿಸಿಲಿರಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕೋಟ, ಗೋಕರ್ಣ, ಹೊನ್ನಾವರ, ಬೆಂಗಳೂರು, ಸಿದ್ದಾಪುರ, ಗೇರುಸೊಪ್ಪ, ಉಡುಪಿ, ಕುಂದಾಪುರ, ಉಪ್ಪಿನಂಗಡಿ, ಕ್ಯಾಸಲ್​ರಾಕ್​, ಕುಮಟಾ, ಲೋಂಡಾ, ಕಮ್ಮರಡಿ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ಕರ್ನಾಟಕದಾದ್ಯಂತ ಕಡಿಮೆಯಾದ ಮಳೆ, ಬಹುತೇಕ ಕಡೆ ಒಣಹವೆ

ಬೆಂಗಳೂರಲ್ಲಿ ಆಗಾಗ ತುಂತುರು ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್​, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!