ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗುತ್ತಿದ್ದು, ಕ್ರಮೇಣವಾಗಿ ಬಿಸಿಲಿನ ಝಳ ಹೆಚ್ಚಾಗತೊಡಗಿದೆ. ಮೊದಲೆಲ್ಲಾ ಮಳೆಗಾಲ ನಿಂತ ಬಳಿಕ ಸ್ವಲ್ಪ ದಿನಗಳ ಕಾಲ ತಂಪಾದ ವಾತಾವರಣವಿರುತ್ತಿತ್ತು ಆದರೆ ಈಗ ಮಳೆ ಕಡಿಮೆಯಾಗುತ್ತಿದ್ದಂತೆ ತಾಪಮಾನ ಹೆಚ್ಚಳವಾಗುತ್ತಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲಿ ಬಿಸಿಲಿರಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕೋಟ, ಗೋಕರ್ಣ, ಹೊನ್ನಾವರ, ಬೆಂಗಳೂರು, ಸಿದ್ದಾಪುರ, ಗೇರುಸೊಪ್ಪ, ಉಡುಪಿ, ಕುಂದಾಪುರ, ಉಪ್ಪಿನಂಗಡಿ, ಕ್ಯಾಸಲ್ರಾಕ್, ಕುಮಟಾ, ಲೋಂಡಾ, ಕಮ್ಮರಡಿ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: ಕರ್ನಾಟಕದಾದ್ಯಂತ ಕಡಿಮೆಯಾದ ಮಳೆ, ಬಹುತೇಕ ಕಡೆ ಒಣಹವೆ
ಬೆಂಗಳೂರಲ್ಲಿ ಆಗಾಗ ತುಂತುರು ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ