Karnataka Rains: ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ವಿಪರೀತ ಮಳೆ

ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಕೂಡ ಎರಡು ದಿನಗಳ ಬಳಿಕ ಮಳೆ ಜೋರಾಗಲಿದೆ.

Karnataka Rains: ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ವಿಪರೀತ ಮಳೆ
ಮಳೆ
Image Credit source: Mint

Updated on: May 15, 2024 | 7:38 AM

ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಕೂಡ ಎರಡು ದಿನಗಳ ಬಳಿಕ ಮಳೆ ಜೋರಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ,ವಿಜಯನಗರದಲ್ಲೂ ಸಾಧಾರಣ ಮಳೆಯಾಗಲಿದೆ.

ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಂಡ್ಯ, ನಿಪ್ಪಾಣಿ, ನಂಜನಗೂಡು, ಚನ್ನಪಟ್ಟಣ, ರಾಮನಗರ, ಹೆಸರಘಟ್ಟ, ಮಾಗಡಿ, ಕೃಷ್ಣರಾಜಪೇಟೆ, ಮದ್ದೂರು, ತಿಪಟೂರು, ಯುಗಟಿ, ತೊಂಡೇಭಾವಿ, ಹುಣಸೂರು, ಅಜ್ಜಂಪುರ, ಸಕಲೇಶಪುರ, ಬೇಗೂರು, ಹಾರಂಗಿ, ಕುಣಿಗಲ್, ಮುಳವಳ್ಳಿ, ಶ್ರವಣಬೆಳಗೊಳದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಕೊಡಗು ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ

ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 38.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 37.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿಕ್ಕಮಗಳೂರಿನಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 32.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us