Karnataka Rains: ಕರ್ನಾಟಕದ ಕರಾವಳಿಯಲ್ಲಿ ಆ.7ರವರೆಗೆ ಭಾರಿ ಮಳೆ, ಬೆಂಗಳೂರು ಹವಾಮಾನ ಹೇಗಿದೆ?

ಕರ್ನಾಟಕದದ್ಯಂತ ಮುಂಗಾರು ದುಬಲವಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಆ.7ರವರೆಗೆ ಭಾರಿ ಮಳೆ, ಬೆಂಗಳೂರು ಹವಾಮಾನ ಹೇಗಿದೆ?
ಮಳೆ
Image Credit source: PTI

Updated on: Aug 01, 2025 | 7:19 AM

ಬೆಂಗಳೂರು, ಆಗಸ್ಟ್​ 01: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 7ರವರೆಗೂ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಆಗುಂಬೆ, ಸಿದ್ದಾಪುರ, ಮೂಡುಬಿದಿರೆ, ಮಂಕಿ, ಗೇರುಸೊಪ್ಪ, ಧರ್ಮಸ್ಥಳ, ಬೆಳ್ತಂಗಡಿ,ಉಡುಪಿ, ಸುಳ್ಯ, ಪುತ್ತೂರು, ಕೊಟ್ಟಿಗೆಹಾರ, ಕೊಪ್ಪ, ಕಾರ್ಕಳ ಕಮ್ಮರಡಿ, ಕದ್ರಾ, ಹೊನ್ನಾವರ, ಭಾಗಮಂಡಲ, ತರೀಕೆರೆ, ಶೃಂಗೇರಿ, ಸೋಮವಾರಪೇಟೆ, ಶಕ್ತನಗರ, ಪೊನ್ನಂಪೇಟೆ, ನಾಪೋಕ್ಲು, ಲೋಂಡಾ, ಕಳಸ, ಜಯಪುರ, ಅಜ್ಜಂಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರ ಸಾಕಷ್ಟು ಕಡೆಗಳಲ್ಲಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 29 ಡಿಗ್ರ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಭಾರಿ ಮಳೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us