AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು, 8 ಜಿಲ್ಲೆಗಳಲ್ಲಿ ಮಳೆಯೋ ಮಳೆ

ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮಳೆ ಶುರುವಾಗಲಿದೆ. 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.ಗೋಕರ್ಣ, ಸಿದ್ದಾಪುರ, ಕುಮಟಾ, ಹಳಿಯಾಳದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಕೂಡ ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆಯವರೆಗೂ ಗುಡುಗು ಸಹಿತ ಮಳೆಯಾಗಿದೆ.

Karnataka Rains: ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು, 8 ಜಿಲ್ಲೆಗಳಲ್ಲಿ ಮಳೆಯೋ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Sep 11, 2025 | 7:24 AM

Share

ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕದಲ್ಲಿ ಮತ್ತೆ ಮಳೆ(Rain) ಚುರುಕಾಗಿದೆ. 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮಂಡ್ಯ, ಮೈಸೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

ಗೋಕರ್ಣ, ಸಿದ್ದಾಪುರ, ಕುಮಟಾ, ಹಳಿಯಾಳದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಕೂಡ ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆಯವರೆಗೂ ಗುಡುಗು ಸಹಿತ ಮಳೆಯಾಗಿದೆ. ಎಚ್​​ಎಎಲ್​​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.6 ಡಿಗ್ರಿ ಸೆಲ್ಸಿಯಸ್ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 23.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:  Karnataka Rains: ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ 2 ದಿನಗಳ ಬಳಿಕ ಮತ್ತೆ ಶುರುವಾಗುತ್ತೆ ಮಳೆ

ಗದಗದಲ್ಲಿ31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ