Karnataka Rains: ಮುಂದಿನ ಒಂದು ವಾರ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದ್ದು, ಹಲವೆಡೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲಿ ಬುಧವಾರ ರಾತ್ರಿಯಿಂದಲೇ ಮಳೆ ಶುರುವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಮುಂದಿನ ಒಂದು ವಾರ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆ
ಮಳೆ
Image Credit source: PTI

Updated on: Oct 10, 2024 | 7:39 AM

ಮುಂದಿನ ಒಂದು ವಾರಗಳವರೆಗೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬುಧವಾರ ರಾತ್ರಿಯಿಂದಲೇ ಮಳೆ ಶುರುವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಮಂಡ್ಯ, ಮೈಸೂರು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ. ಕಿರವತ್ತಿ, ಕೊಲ್ಲೂರು, ಹುಂಚದಕಟ್ಟೆ, ಮುಂಡಗೋಡು, ಕದ್ರಾ, ಸಿದ್ದಾಪುರ, ತ್ಯಾಗರ್ತಿ, ಜಯಪುರ, ಎನ್​ಆರ್​ಪುರ, ಬನವಾಸಿ, ಕಾರವಾರ, ಲೋಂಡಾ, ಆಗುಂಬೆ, ಹಿರೇಕೆರೂರು, ಕೊಟ್ಟಿಗೆಹಾರ, ಹಳಿಯಾಳ, ಯಲ್ಲಾಪುರ, ಕುಂದಗೋಳ, ಹಾವೇರಿ, ಶೃಂಗೇರಿ, ಕೊಪ್ಪ, ಮೂಡಿಗೆರೆ, ಕುಮಟಾ, ಬೆಳಗಾವಿ, ಕಳಸ, ಬಾಳೆಹೊನ್ನೂರು, ದಾವಣಗೆರೆಯಲ್ಲಿ ಮಳೆಯಾಗಿದೆ.

ಗೋಕರ್ಣ, ಗೇರುಸೊಪ್ಪ, ಧಾರವಾಡ, ಲಕ್ಷ್ಮೇಶ್ವರ, ಧಾರವಾಡ, ನಾಯಕನಹಟ್ಟಿ, ಕಮ್ಮರಡಿ, ಕುಂದಾಪುರ, ಮಂಕಿ, ಹೊನ್ನಾವರ, ಧರ್ಮಸ್ಥಳ, ಕೋಟ, ಉಡುಪಿ, ಬೈಲಹೊಂಗಲ, ನಾಪೋಕ್ಲು, ಚನ್ನಗಿರಿ, ನರಗುಂದ, ದಾವಣಗೆರೆ, ಬೇಲೂರು, ಸೋಮವಾರಪೇಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ

ಬೆಂಗಳೂರಿನ ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 17.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us