ಬೆಂಗಳೂರು ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಹುಣಸಗಿ, ಮುನಿರಾಬಾದ್, ರಬಕವಿ, ಯಡವಾಡ, ಶಿವಮೊಗ್ಗ, ಕುಶಾಲನಗರ, ಭಾಲ್ಕಿ, ಕವಡಿಮಟ್ಟಿ, ಸೋಮವಾರಪೇಟೆ, ಶೋರಾಪುರ, ಮುದ್ದೇಬಿಹಾಳ, ಗುಂಡ್ಲುಪೇಟೆ, ಲೋಕಾಪುರ, ತ್ಯಾಗರ್ತಿ, ಗುಂಡ್ಲುಪೇಟೆ, ಅಜ್ಜಂಪುರ, ಆಗುಂಬೆ, ಶ್ರವಣಬೆಳಗೊಳ, ಕಮ್ಮರಡಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆ ವೇಳೆಗೆ ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಆಗಸ್ಟ್ 20ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ
ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಸಯ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ,26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ