ಕರಾವಳಿಯ ಎಲ್ಲಾ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು , ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸವಣೂರು, ಅಣ್ಣಿಗೆರೆ, ಲಕ್ಷ್ಮೇಶ್ವರ, ಬನವಾಸಿ, ಧಾರವಾಡ, ರಾಣೆಬೆನ್ನೂರು, ಬಂಕಾಪುರ ಶಿಗ್ಗಾಂವ್, ಗುತ್ತಲ್, ಶಿರಹಟ್ಟಿ, ಬೇಲೂರು, ಬುಕ್ಕಪಟ್ಟಣದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಬಹುದು ಎನ್ನಲಾಗಿದೆ, ಎಚ್ಎಎಲ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಅಂಡಮಾನ್ ಮತ್ತು ನಿಕೋಬರ್ ದ್ವೀಪ: ಭಾರತದ ದ್ವೀಪ ಪ್ರದೇಶವಾದ, ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬರ್ ದ್ವೀಪದಲ್ಲಿ ಮೇ 13ರಂದು ತೀವ್ರ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ತ್ರಿಪುರಾ ಹಾಗೂ ಮಿಜೋರಾಂ: ಮೇ 14 ರಂದು ಹಲವಾರು ಪ್ರದೇಶಗಳಲ್ಲಿ ತೀವ್ರ ಮಳೆಯಾಗಲಿದೆ.
ನಾಗಾಲ್ಯಾಂಡ್, ಮಣಿಪುರ ಹಾಗೂ ದಕ್ಷಿಣ ಅಸ್ಸಾಂ: ಮೇ 14ರಂದು ನಾಗಾಲ್ಯಾಂಡ್, ಮಣಿಪುರ & ದಕ್ಷಿಣ ಅಸ್ಸಾಂ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.
ಮೇ 14ರಂದು ಮಯನ್ಮಾರ್ ಮೇಲೆ ಮೋಚಾ ಚಂಡಮಾರುತವು ತೀವ್ರ ಪ್ರಭಾವ ಉಂಟು ಮಾಡಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆಗಳು ಮಾಹಿತಿ ನೀಡಿದೆ. ಈ ಬೆನ್ನಲ್ಲೇ ಮಯನ್ಮಾರ್‌ನಲ್ಲಿ ಸಾವಿರಾರು ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ