Karnataka Rains: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆ
ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಶನಿವಾರ ಹಲವೆಡೆ ಮಳೆಯಾಗಿತ್ತು ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿಲ್ಲ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಶನಿವಾರ ಹಲವೆಡೆ ಮಳೆಯಾಗಿತ್ತು ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿಲ್ಲ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ನವೆಂಬರ್ 20ರ ಬಳಿಕ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಉಪ್ಪಿನಂಗಡಿ, ಶ್ರವಣಬೆಳಗೊಳ, ಹೊಸಕೋಟೆ, ಅರಕಲಗೂಡು, ಚಿಂತಾಮಣಿ, ನಾಗಮಂಗಲ. ಚಾಮರಾಜನಗರ, ಕೋಲಾರದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ, ಉಳಿದೆಡೆ ಒಣಹವೆ
ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ