Karnataka Rains: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆ

ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಶನಿವಾರ ಹಲವೆಡೆ ಮಳೆಯಾಗಿತ್ತು ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿಲ್ಲ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆ
ಮಳೆ
Image Credit source: PTI

Updated on: Nov 18, 2024 | 7:34 AM

ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಶನಿವಾರ ಹಲವೆಡೆ ಮಳೆಯಾಗಿತ್ತು ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿಲ್ಲ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ನವೆಂಬರ್ 20ರ ಬಳಿಕ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಉಪ್ಪಿನಂಗಡಿ, ಶ್ರವಣಬೆಳಗೊಳ, ಹೊಸಕೋಟೆ, ಅರಕಲಗೂಡು, ಚಿಂತಾಮಣಿ, ನಾಗಮಂಗಲ. ಚಾಮರಾಜನಗರ, ಕೋಲಾರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ, ಉಳಿದೆಡೆ ಒಣಹವೆ

ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us