Karnataka Rains: ಶಿವಮೊಗ್ಗ, ಮೈಸೂರು ಸೇರಿ ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಯೆಲ್ಲೋ ಅಲರ್ಟ್​

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಕರ್ನಾಟಕದ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.

Karnataka Rains: ಶಿವಮೊಗ್ಗ, ಮೈಸೂರು ಸೇರಿ ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆ Image Credit source: Getty Images
Follow us
ನಯನಾ ರಾಜೀವ್
|

Updated on: Nov 15, 2024 | 7:31 AM

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ವಿಜಯನಗರ, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು, ಶ್ರವಣಬೆಳಗೊಳ, ಹಾಸನದ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕಾರವಾರ ಹಾಗೂ ಪಣಂಬೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಗುರುವಾರ ಇಡೀ ದಿನ ಮೋಡಕವಿದ ವಾತಾವರಣವಿತ್ತು, ಆಗಾಗ ಮಳೆಯಾಗಿತ್ತು. ಇಂದು ಕೂಡ ಅದೇ ವಾತಾವರಣ ಮುಂದುವರೆದಿದೆ.

ಎಚ್​ಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಜೋರು ಮಳೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್