ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ವಿಜಯನಗರ, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು, ಶ್ರವಣಬೆಳಗೊಳ, ಹಾಸನದ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕಾರವಾರ ಹಾಗೂ ಪಣಂಬೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಗುರುವಾರ ಇಡೀ ದಿನ ಮೋಡಕವಿದ ವಾತಾವರಣವಿತ್ತು, ಆಗಾಗ ಮಳೆಯಾಗಿತ್ತು. ಇಂದು ಕೂಡ ಅದೇ ವಾತಾವರಣ ಮುಂದುವರೆದಿದೆ.
ಎಚ್ಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಜೋರು ಮಳೆ, ಯೆಲ್ಲೋ ಅಲರ್ಟ್
ಹೊನ್ನಾವರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ