Karnataka Rains: ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಹಾಸನ,ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ
Image Credit source: Business Today

Updated on: Sep 03, 2024 | 7:35 AM

ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್​, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಹಾಸನ,ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಔರಾದ್, ಭಾಲ್ಕಿ, ಬೀದರ್, ಸೋಮವಾರಪೇಟೆ, ಶೃಂಗೇರಿ, ಹುಮನಾಬಾದ್, ಮಂಠಾಳ, ಚಿಟಗುಪ್ಪ, ಕ್ಯಾಸಲ್​ರಾಕ್, ಲಿಂಗನಮಕ್ಕಿ, ಶೋರಾಪುರ, ಗೇರುಸೊಪ್ಪ, ಧರ್ಮಸ್ಥಳ, ಗಬ್ಬೂರು, ಕಲಬುರಗಿ, ಕೆಂಭಾವಿ, ಸೈದಾಪುರ, ಯಡ್ರಾಮಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಸೆ.7ರವರೆಗೆ ಮಳೆ

ನೆಲೋಗಿ, ಬಾಳೆಹೊನ್ನೂರು, ಅಂಕೋಲಾ, ಬೆಳ್ತಂಗಡಿ, ಸಿದ್ದಾಪುರ, ಪುತ್ತೂರು, ಶಿರಾಲಿ, ಕೊಲ್ಲೂರು, ಮಾಣಿ, ಕುಮಟಾ, ಕೋಟ, ಉಪ್ಪಿನಂಗಡಿ, ಚಿತ್ತಾಪುರ, ಬೈಲಹೊಂಗಲ, ಹುಣಸಗಿ, ಮುದ್ದೇಬಿಹಾಳ, ಕಮ್ಮರಡಿ, ಕಳಸ, ಕುಶಾಲನಗರ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಆಗಾಗ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 22.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 24.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 26.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 25.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 23.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 21.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us