Karnataka Rains: ಕರ್ನಾಟಕದ ಕರಾವಳಿಯಲ್ಲಿ ಜುಲೈ 7ರವರೆಗೂ ಮಳೆ ಜೋರು, ಯೆಲ್ಲೋ ಅಲರ್ಟ್​

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯಾಗುತ್ತಿದ್ದು, ಉಳಿದೆಡೆ ಆಗಾಗ ಒಂದೊಂದು ಮಳೆಯಾಗುತ್ತಿದೆ. ಬಹುತೇಕ ಒಣಹವೆ ಇದೆ. ಜುಲೈ 3ರಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಮ ಗದಗ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಜುಲೈ 7ರವರೆಗೂ ಮಳೆ ಜೋರು, ಯೆಲ್ಲೋ ಅಲರ್ಟ್​
ಮಳೆ
Image Credit source: PTI

Updated on: Jul 01, 2025 | 7:21 AM

ಬೆಂಗಳೂರು, ಜುಲೈ 1: ಕರ್ನಾಟಕದ ಕರಾವಳಿಯಲ್ಲಿ ಜುಲೈ 7ರವರೆಗೂ ಭಾರಿ ಮಳೆ(Rain) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಮ ಗದಗ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.
ಕ್ಯಾಸಲ್​ರಾಕ್, ಮೂಡುಬಿದಿರೆ, ಲೋಂಡಾ, ಉಡುಪಿ, ಕೋಟಾ, ಕಾರ್ಕಳ, ಮಂಗಳೂರು, ಆಗುಂಬೆ, ಶೃಂಗೇರಿ, ಬೆಳ್ತಂಗಡಿ, ಕದ್ರಾ, ಧರ್ಮಸ್ಥಳ, ಪಣಂಬೂರು, ಮಾಣಿ, ಬಂಟವಾಳ, ಕುಂದಾಪುರ, ಜೋಯ್ಡಾ, ಗೋಕರ್ಣ, ಖಾನಾಪುರ, ಮಂಕಿ, ಸುಳ್ಯ, ಕಳಸ, ಕೊಟ್ಟಿಗೆಹಾರ, ಕೊಪ್ಪ, ಭಾಗಮಂಡಲದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಜುಲೈ 3ರಿಂದ ಮಳೆಯ ಅಬ್ಬರ ಜೋರು, ಯೆಲ್ಲೋ ಅಲರ್ಟ್​

ಬೆಳಗಾವಿ ಏರ್​ಪೋರ್ಟ್​ನಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us