Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ ಮಳೆ

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 1ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ ಮಳೆ
ಮಳೆ
Image Credit source: PTI

Updated on: Nov 26, 2024 | 7:27 AM

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 1ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಮತ್ತಷ್ಟು ಓದಿ: ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮಳೆ, ಚಳಿಯ ಪ್ರಮಾಣವೂ ಹೆಚ್ಚಳ

ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್​ನಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮತ್ತೊಂದೆಡೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣವೂ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us