AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದಾದ್ಯಂತ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Jul 20, 2025 | 8:06 AM

Share

ಬೆಂಗಳೂರು, ಜುಲೈ 20: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ(Rain)ಯಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಶಿರಾಲಿ, ಮಂಕಿ, ಗೇರುಸೊಪ್ಪ, ಕುರ್ಡಿ, ಚಿಂಚೋಳಿ, ಗದಗ, ಮಂಗಳೂರು, ಹೊನ್ನಾವರ, ಶಕ್ತಿನಗರ, ವಿಜಯಪುರ, ಆಗುಂಬೆಯಲ್ಲಿ ಭಾರಿ ಮಳೆಯಾಗಿದೆ. ಲಿಂಗಸುಗೂರು, ಹುಮ್ನಾಬಾದ್, ಕೆರೂರು, ಮಾಣಿ, ಮಂಠಾಳ, ಸುಳ್ಯ, ಇಳಕಲ್, ಗೋಕರ್ಣ, ಕ್ಯಾಸಲ್​​ರಾಕ್, ಪುತ್ತೂರು, ಬಂಟವಾಳ, ಪಾವಗಡ, ಕಾರ್ಕಳ, ಭಾಗಮಂಡಲ, ಬೆಳ್ಳೂರು, ಅಂಕೋಲಾ, ನಲ್ವತವಾಡ, ಹುಣಸಗಿ, ಹುನಗುಂದ, ಬಾದಾಮಿ, ನರಗುಂದ, ಆಲಮಟ್ಟಿ, ಜೋಯ್ಡಾ, ಅಣ್ಣಿಗೆರೆ, ಕಮಲಾಪುರ, ಸಿಂಧನೂರು, ಕುಷ್ಟಗಿ, ಕಮ್ಮರಡಿ, ಕೊಪ್ಪ, ಕೋಟಾ, ಹುಂಚದಕಟ್ಟೆ, ಪೊನ್ನಂಪೇಟೆ, ಕಳಸ, ಮದ್ದೂರು, ಜಯಪುರ, ಸೋಮವಾರಪೇಟೆ, ಸಿದ್ದಾಪುರ, ಧರ್ಮಸ್ಥಳ, ಬಿಳಗಿ, ಮಾನ್ವಿ, ಸಿದ್ದಾಪುರ, ಧರ್ಮಸ್ಥಳ, ಬೀದರ್, ಮುನಿರಾಬಾದ್, ತಾವರಗೇರಾ, ಸೇಡಂ, ಹಾವೇರಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಶನಿವಾರ ಅಲ್ಲಲ್ಲಿ ಮಳೆಯಾಗಿತ್ತು. ಎಚ್​​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕೊಡಗು ಸೇರಿ ಕರ್ನಾಟಕದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಜು.24ರವರೆಗೂ ಹುಚ್ಚು ಮಳೆ

ಹೊನ್ನಾವರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಾರವಾರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಶಕ್ತಿನಗರದಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!