Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದಾದ್ಯಂತ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ
Image Credit source: PTI

Updated on: Jul 20, 2025 | 8:06 AM

ಬೆಂಗಳೂರು, ಜುಲೈ 20: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ(Rain)ಯಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ.
ಶಿರಾಲಿ, ಮಂಕಿ, ಗೇರುಸೊಪ್ಪ, ಕುರ್ಡಿ, ಚಿಂಚೋಳಿ, ಗದಗ, ಮಂಗಳೂರು, ಹೊನ್ನಾವರ, ಶಕ್ತಿನಗರ, ವಿಜಯಪುರ, ಆಗುಂಬೆಯಲ್ಲಿ ಭಾರಿ ಮಳೆಯಾಗಿದೆ. ಲಿಂಗಸುಗೂರು, ಹುಮ್ನಾಬಾದ್, ಕೆರೂರು, ಮಾಣಿ, ಮಂಠಾಳ, ಸುಳ್ಯ, ಇಳಕಲ್, ಗೋಕರ್ಣ, ಕ್ಯಾಸಲ್​​ರಾಕ್, ಪುತ್ತೂರು, ಬಂಟವಾಳ, ಪಾವಗಡ, ಕಾರ್ಕಳ, ಭಾಗಮಂಡಲ, ಬೆಳ್ಳೂರು, ಅಂಕೋಲಾ, ನಲ್ವತವಾಡ, ಹುಣಸಗಿ, ಹುನಗುಂದ, ಬಾದಾಮಿ, ನರಗುಂದ, ಆಲಮಟ್ಟಿ, ಜೋಯ್ಡಾ, ಅಣ್ಣಿಗೆರೆ, ಕಮಲಾಪುರ, ಸಿಂಧನೂರು, ಕುಷ್ಟಗಿ, ಕಮ್ಮರಡಿ, ಕೊಪ್ಪ, ಕೋಟಾ, ಹುಂಚದಕಟ್ಟೆ, ಪೊನ್ನಂಪೇಟೆ, ಕಳಸ, ಮದ್ದೂರು, ಜಯಪುರ, ಸೋಮವಾರಪೇಟೆ, ಸಿದ್ದಾಪುರ, ಧರ್ಮಸ್ಥಳ, ಬಿಳಗಿ, ಮಾನ್ವಿ, ಸಿದ್ದಾಪುರ, ಧರ್ಮಸ್ಥಳ, ಬೀದರ್, ಮುನಿರಾಬಾದ್, ತಾವರಗೇರಾ, ಸೇಡಂ, ಹಾವೇರಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಶನಿವಾರ ಅಲ್ಲಲ್ಲಿ ಮಳೆಯಾಗಿತ್ತು. ಎಚ್​​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕೊಡಗು ಸೇರಿ ಕರ್ನಾಟಕದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಜು.24ರವರೆಗೂ ಹುಚ್ಚು ಮಳೆ

ಹೊನ್ನಾವರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಾರವಾರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಶಕ್ತಿನಗರದಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ