AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಜೂನ್ 26ರವರೆಗೂ ಭಾರಿ ಮಳೆ, ಉಳಿದೆಡೆ ಒಣಹವೆ

ಕರ್ನಾಟಕದಾದ್ಯಂತ ಜೂನ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಜೂನ್ 26ರವರೆಗೂ ಭಾರಿ ಮಳೆ, ಉಳಿದೆಡೆ ಒಣಹವೆ
ಮಳೆ Image Credit source: PTI
ನಯನಾ ರಾಜೀವ್
|

Updated on: Jun 20, 2025 | 7:21 AM

Share

ಬೆಂಗಳೂರು, ಜೂನ್ 20: ಕರ್ನಾಟಕದಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆ ಮಳೆ(Rain)ಯ ಪ್ರಮಾಣ ಕಡಿಮೆಯಾಗಿತ್ತು. ಮುಂಗಾರು ಪೂರ್ವ ಮಳೆಯ ಅಬ್ಬರವೇ ಹೆಚ್ಚಿತ್ತು. ಕಳೆದ ಎರಡು ದಿನಗಳಿಂದ ಮುಂಗಾರು ಮಳೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತುಸು ಹೆಚ್ಚಿತ್ತು. ಆದರೆ ಈಗ ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ. ಉಪ್ಪಿನಂಗಡಿ, ಗೇರುಸೊಪ್ಪ, ಮಂಕಿ, ಯಲ್ಲಾಪುರ, ಆಗುಂಬೆ, ಕೊಟ್ಟಿಗೆಹಾರ, ಕಮ್ಮರಡಿ, ಭಾಗಮಂಡಲ, ಹುಂಚದಕಟ್ಟೆ, ಶಿರಾಲಿ, ಕದ್ರಾ, ಸುಳ್ಯ, ಕುಮಟಾ, ಧರ್ಮಸ್ಥಳ, ಬನವಾಸಿ, ಜೋಯ್ಡಾ, ಬೆಳ್ತಂಗಡಿ, ಹೊನ್ನಾವರ, ತ್ಯಾಗರ್ತಿ, ಖಾನಾಪುರ್, ಗುತ್ತಲ್, ಆನವಟ್ಟಿ, ಕಳಸ, ವಿರಾಜಪೇಟೆ, ಹೊಸಕೋಟೆ, ಅಂಕೋಲಾ, ಪುತ್ತೂರ್, ಮೂಡುಬಿದಿರೆ, ಬಂಟವಾಳ, ಸಿದ್ದಾಪುರ, ಮಾಣಿ, ಕಾರವಾರ, ಮುಂಡಗೋಡಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ದಕ್ಷಿಣ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು; ಮಂಗಳೂರು, ಚಿಕ್ಕಮಗಳೂರಿನ ಹಲವೆಡೆ ಅನಾಹುತ

ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಳಗಾವಿಯಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ