AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ. 11ರಿಂದ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಮುಂದಿನ ಮೂರು ದಿನದ ಬಳಿಕ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಟಿಜಿ ಹಳ್ಳಿ, ಕುಂದಾಪುರ, ಕೊಟ್ಟಿಗೆಹಾರ, ಕಿಬ್ಬನಹಳ್ಳಿ, ಕದ್ರಾ, ಗುಬ್ಬಿ, ಪೊನ್ನಂಪೇಟೆ, ಮೈಸೂರು, ಮಂಕಿ, ಮಂಗಳೂರು, ಕನಕಪುರ, ಭಾಗಮಂಡಲ, ಗೋಕರ್ಣ, ಧರ್ಮಸ್ಥಳ, ಹೊನ್ನಾವರ, ಬಂಟವಾಳ, ಆಗುಂಬೆಯಲ್ಲಿ ಮಳೆಯಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ. 11ರಿಂದ  ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on: Sep 08, 2025 | 7:21 AM

Share

ಬೆಂಗಳೂರು, ಸೆಪ್ಟೆಂಬರ್ 08: ಕರ್ನಾಟಕದಾದ್ಯಂತ ಕಳೆದ ಎರಡು ದಿನಗಳಿಂದ ಮಳೆ(Rain)ಯ ಪ್ರಮಾಣ ಕಡಿಮೆಯಾಗಿದೆ. ಮೋಡಕವಿದ ವಾತಾವರಣವಿದ್ದರೂ ಮಳೆಯಾಗಿಲ್ಲ. ಹಾಗೆಯೇ ಸೆಪ್ಟೆಂಬರ್ 11ರಿಂದ ರಾಜ್ಯದ ಸಾಕಷ್ಟು ಕಡೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಟಿಜಿ ಹಳ್ಳಿ, ಕುಂದಾಪುರ, ಕೊಟ್ಟಿಗೆಹಾರ, ಕಿಬ್ಬನಹಳ್ಳಿ, ಕದ್ರಾ, ಗುಬ್ಬಿ, ಪೊನ್ನಂಪೇಟೆ, ಮೈಸೂರು, ಮಂಕಿ, ಮಂಗಳೂರು, ಕನಕಪುರ, ಭಾಗಮಂಡಲ, ಗೋಕರ್ಣ, ಧರ್ಮಸ್ಥಳ, ಹೊನ್ನಾವರ, ಬಂಟವಾಳ, ಆಗುಂಬೆಯಲ್ಲಿ ಮಳೆಯಾಗಿದೆ.

ಎಚ್​ಎಎಲ್​​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಇಂದು ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಜೋರು

ಹೊನ್ನಾವರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್