Karnataka Rains: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ. 11ರಿಂದ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಮುಂದಿನ ಮೂರು ದಿನದ ಬಳಿಕ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಟಿಜಿ ಹಳ್ಳಿ, ಕುಂದಾಪುರ, ಕೊಟ್ಟಿಗೆಹಾರ, ಕಿಬ್ಬನಹಳ್ಳಿ, ಕದ್ರಾ, ಗುಬ್ಬಿ, ಪೊನ್ನಂಪೇಟೆ, ಮೈಸೂರು, ಮಂಕಿ, ಮಂಗಳೂರು, ಕನಕಪುರ, ಭಾಗಮಂಡಲ, ಗೋಕರ್ಣ, ಧರ್ಮಸ್ಥಳ, ಹೊನ್ನಾವರ, ಬಂಟವಾಳ, ಆಗುಂಬೆಯಲ್ಲಿ ಮಳೆಯಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ. 11ರಿಂದ  ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆ
Image Credit source: PTI

Updated on: Sep 08, 2025 | 7:21 AM

ಬೆಂಗಳೂರು, ಸೆಪ್ಟೆಂಬರ್ 08: ಕರ್ನಾಟಕದಾದ್ಯಂತ ಕಳೆದ ಎರಡು ದಿನಗಳಿಂದ ಮಳೆ(Rain)ಯ ಪ್ರಮಾಣ ಕಡಿಮೆಯಾಗಿದೆ. ಮೋಡಕವಿದ ವಾತಾವರಣವಿದ್ದರೂ ಮಳೆಯಾಗಿಲ್ಲ. ಹಾಗೆಯೇ ಸೆಪ್ಟೆಂಬರ್ 11ರಿಂದ ರಾಜ್ಯದ ಸಾಕಷ್ಟು ಕಡೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಟಿಜಿ ಹಳ್ಳಿ, ಕುಂದಾಪುರ, ಕೊಟ್ಟಿಗೆಹಾರ, ಕಿಬ್ಬನಹಳ್ಳಿ, ಕದ್ರಾ, ಗುಬ್ಬಿ, ಪೊನ್ನಂಪೇಟೆ, ಮೈಸೂರು, ಮಂಕಿ, ಮಂಗಳೂರು, ಕನಕಪುರ, ಭಾಗಮಂಡಲ, ಗೋಕರ್ಣ, ಧರ್ಮಸ್ಥಳ, ಹೊನ್ನಾವರ, ಬಂಟವಾಳ, ಆಗುಂಬೆಯಲ್ಲಿ ಮಳೆಯಾಗಿದೆ.

ಎಚ್ಎಎಲ್​​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಇಂದು ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಜೋರು

ಹೊನ್ನಾವರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್​​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us