Karnataka Rains: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​

ಕರ್ನಾಟಕದಾದ್ಯಂತ ಗಣೇಶ ಚತುರ್ಥಿ ಬಳಿಕ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆಯಲ್ಲಿ ಕೂಡ ಒಂದು ವಾರಗಳ ಕಾಲ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​
ಮಳೆ
Image Credit source: PTI

Updated on: Aug 25, 2025 | 7:24 AM

ಬೆಂಗಳೂರು, ಆಗಸ್ಟ್​ 25: ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ(Rain)ಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಗಣೇಶ ಚತುರ್ಥಿ ಬಳಿಕ ಮಳೆ ಹೆಚ್ಚಾಗಲಿದೆ.
ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆಯಲ್ಲಿ ಕೂಡ ಒಂದು ವಾರಗಳ ಕಾಲ ಮಳೆಯಾಗಲಿದೆ.

ಕೋಲಾರ, ಆಗುಂಬೆ, ಸಿದ್ದಾಪುರ, ಲೋಂಡಾ, ಕದ್ರಾ, ಗೇರುಸೊಪ್ಪ, ಕ್ಯಾಸಲ್​ರಾಕ್, ಬೆಂಗಳೂರು ಕೆಐಎಎಲ್​, ಝಲ್ಕಿ, ಶೃಂಗೇರಿ, ಸಿಂಧನೂರು, ಶಕ್ತಿನಗರ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಹೊಸಕೋಟೆ, ಹೊನ್ನಾವರ, ದಾವಣಗೆರೆ, ಬಂಟವಾಳದಲ್ಲಿ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್ 27ರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆ

ಹೊನ್ನಾವರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us