Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 11ರವರೆಗೂ ಮಳೆ

ಕರ್ನಾಟಕದಲ್ಲಿ ಮೇ 7ರಿಂದ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮನರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 11ರವರೆಗೂ ಮಳೆ
ಮಳೆ
Image Credit source: PTI

Updated on: May 05, 2025 | 7:13 AM

ಬೆಂಗಳೂರು, ಮೇ 05: ಕರ್ನಾಟಕದ ಹಲವೆಡೆ ಮೇ11ರವರೆಗೂ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನಗಳ ಬಿಡುವು ಪಡೆದು ಮೇ 7ರಿಂದ ಮಳೆ ಮತ್ತೆ ಚುರುಕಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮನರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಭಾನುವಾರ ಮಂಗಳೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Rains: ಬೆಂಗಳೂರಲ್ಲಿ ಇಂದು ಮಳೆ ಜೋರು, ಕರ್ನಾಟಕದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಳಗಾವಿಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 42.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us