AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 8ರವರೆಗೂ ಮಳೆ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ  ಅಕ್ಟೋಬರ್ 8ರವರೆಗೂ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Oct 02, 2024 | 7:37 AM

Share

ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್​ 8ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಪುತ್ತೂರು, ಹುಕ್ಕೇರಿ, ಸಂಕೇಶ್ವರ, ಹಿಡಕಲ್ ಅಣೆಕಟ್ಟು, ಬಾಳೆಹೊನ್ನೂರು, ತಿಪಟೂರು, ಚಿಕ್ಕೋಡಿ, ಕೊಟ್ಟಿಗೆಹಾರ, ಕಳಸ, ದಾವಣಗೆರೆ, ಉಪ್ಪಿನಂಗಡಿ, ಬೈಲಹೊಂಗಲ, ಬೀದರ್, ಜಯಪುರ, ಎನ್​ಆರ್​ಪುರ, ಮೂಡಿಗೆರೆ, ಕಾರ್ಕಳ, ಮುಂಡಗೋಡು, ಧರ್ಮಸ್ಥಳ, ಕುಂದಗೋಳ, ಲಿಂಗಸುಗೂರು, ಹುಂಚದಕಟ್ಟೆ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಸೇರಿ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಇಂದು ಶುಭ್ರ ಆಕಾಶವಿದೆ, ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ಸ್​ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ