AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್​ 6ರವರೆಗೂ ಮಳೆ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್​ 6ರವರೆಗೂ ಮಳೆ
ಮಳೆImage Credit source: PTI
ನಯನಾ ರಾಜೀವ್
|

Updated on: Sep 30, 2024 | 7:39 AM

Share

ಕರ್ನಾಟಕದಲ್ಲಿ ಮಳೆ ಮುಂದುವರೆದಿದೆ, ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಮಳೆಯಾಗಲಿದೆ. ಎಂಎಂ ಹಿಲ್ಸ್​, ನಾಗಮಂಗಲ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕಳ್ಳೇಗಾಲ, ಹೊಸಕೋಟೆ, ಗುಬ್ಬಿ, ಬೆಂಗಳೂರು ನಗರ, ಗೌರಿಬಿದನೂರು, ಬೇಗೂರು, ಬಂಡೀಪುರ, ಕೃಷ್ಣರಾಜಸಾಗರ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಸಯ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ