AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದ 20ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಲೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆImage Credit source: PTI
ನಯನಾ ರಾಜೀವ್
|

Updated on:Oct 06, 2024 | 8:24 AM

Share

ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಡೆಗಳಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಶುರುವಾಗಿದ್ದ ಮಳೆ ಭಾನುವಾರ ಬೆಳಗಿನಜಾವದವರೆಗೂ ಸುರಿದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.

ಆಗುಂಬೆ, ಸಂಡೂರು, ನಾಯಕನಹಟ್ಟಿ, ಧರ್ಮಸ್ಥಳ, ಕಂಪ್ಲಿ, ಕೂಡ್ಲಿಗಿ, ಹೊಸದುರ್ಗ, ಕೊಳ್ಳೇಗಾಲ, ಗಂಗಾವತಿ, ರಾಮನಗರ, ಕನಕಪುರ, ಪಾವಗಡ, ಚಾಮರಾಜನಗರ, ಕುಡತಿನಿ, ಗುಬ್ಬಿ, ಗಂಗಾವತಿ, ಕಕ್ಕೇರಿ, ಕವಡಿಮಟ್ಟಿ, ಹುಣಸಗಿ, ಕೆಂಭಾವಿ, ಸಿಂಧನೂರು, ಬೆಳ್ಳೂರು, ಬರಗೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಶೋರಾಪುರ, ರಾಯಚೂರು, ಮಸ್ಕಿ, ಎಂ.ಎಂ ಹಿಲ್ಸ್​, ಹೊಸಪೇಟೆ, ಮೂರ್ನಾಡು, ನಾಗಮಂಗಲ, ಸಿರಾ, ಭಾಗಮಂಡಲ, ರಾಯಲ್ಪಾಡು, ಗೋಕರ್ಣದಲ್ಲಿ ಮಳೆಯಾಗಿದೆ. ಶಿರಾಲಿ, ಕಲಬುರಗಿ, ಕುಷ್ಟಗಿ, ಖಜೂರಿ, ಇಳಕಲ್, ಹೊಸಕೋಟೆ, ಜಯಪುರ, ಹಗರಿಬೊಮ್ಮನಹಳ್ಳಿ, ಇಳಕಲ್, ಯುಗಟಿ, ಮಧುಗಿರಿ, ಹೊನ್ನಾವರ, ಕಾರವಾರ, ಕುಂದಾಪುರ, ಇಂಡಿ, ತಾಳಿಕೋಟೆ, ಚಿಕ್ಕಮಗಳೂರು, ಕಳಸ, ಮಾಗಡಿ, ಸರಗೂರು, ನಾಪೋಕ್ಲು, ತಿಪಟೂರು, ಕಡೂರು, ತೊಂಡೇಭಾವಿ, ಭದ್ರಾವತಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಣಂಬೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 18.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:15 am, Sun, 6 October 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ