ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಡೆಗಳಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಶುರುವಾಗಿದ್ದ ಮಳೆ ಭಾನುವಾರ ಬೆಳಗಿನಜಾವದವರೆಗೂ ಸುರಿದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಆಗುಂಬೆ, ಸಂಡೂರು, ನಾಯಕನಹಟ್ಟಿ, ಧರ್ಮಸ್ಥಳ, ಕಂಪ್ಲಿ, ಕೂಡ್ಲಿಗಿ, ಹೊಸದುರ್ಗ, ಕೊಳ್ಳೇಗಾಲ, ಗಂಗಾವತಿ, ರಾಮನಗರ, ಕನಕಪುರ, ಪಾವಗಡ, ಚಾಮರಾಜನಗರ, ಕುಡತಿನಿ, ಗುಬ್ಬಿ, ಗಂಗಾವತಿ, ಕಕ್ಕೇರಿ, ಕವಡಿಮಟ್ಟಿ, ಹುಣಸಗಿ, ಕೆಂಭಾವಿ, ಸಿಂಧನೂರು, ಬೆಳ್ಳೂರು, ಬರಗೂರಿನಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್
ಶೋರಾಪುರ, ರಾಯಚೂರು, ಮಸ್ಕಿ, ಎಂ.ಎಂ ಹಿಲ್ಸ್, ಹೊಸಪೇಟೆ, ಮೂರ್ನಾಡು, ನಾಗಮಂಗಲ, ಸಿರಾ, ಭಾಗಮಂಡಲ, ರಾಯಲ್ಪಾಡು, ಗೋಕರ್ಣದಲ್ಲಿ ಮಳೆಯಾಗಿದೆ. ಶಿರಾಲಿ, ಕಲಬುರಗಿ, ಕುಷ್ಟಗಿ, ಖಜೂರಿ, ಇಳಕಲ್, ಹೊಸಕೋಟೆ, ಜಯಪುರ, ಹಗರಿಬೊಮ್ಮನಹಳ್ಳಿ, ಇಳಕಲ್, ಯುಗಟಿ, ಮಧುಗಿರಿ, ಹೊನ್ನಾವರ, ಕಾರವಾರ, ಕುಂದಾಪುರ, ಇಂಡಿ, ತಾಳಿಕೋಟೆ, ಚಿಕ್ಕಮಗಳೂರು, ಕಳಸ, ಮಾಗಡಿ, ಸರಗೂರು, ನಾಪೋಕ್ಲು, ತಿಪಟೂರು, ಕಡೂರು, ತೊಂಡೇಭಾವಿ, ಭದ್ರಾವತಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಎಚ್ಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪಣಂಬೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 18.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:15 am, Sun, 6 October 24