Karnataka Rains: ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಭಾರಿ ಮಳೆ
ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕಾಗುತ್ತಿದೆ. ಸೆಪ್ಟೆಂಬರ್ 1 ರಿಂದ ಒಂದು ವಾರಗಳ ಕಾಲ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಆಗುಂಬೆ, ಧರ್ಮಸ್ಥಳ, ಭಾಗಮಂಡಲ, ಬೆಳ್ತಂಗಡಿ, ಉಡುಪಿ, ಕದ್ರಾ, ಮಂಕಿ, ಸಿದ್ದಾಪುರ, ಕೊಪ್ಪ, ಕಾರ್ಕಳ, ಕೋಟ, ಬೀದರ್, ಮಂಗಳೂರು, ಸೇಡಂ, ಸುಳ್ಯ, ಬೀದರ್, ಸೈದಾಪುರದಲ್ಲಿ ಮಳೆಯಾಗಿದೆ. ಔರಾದ್, ಶೃಂಗೇರಿ, ಕೊಟ್ಟಿಗೆಹಾರ, ಜಯಪುರ, ಕಮ್ಮರಡಿ, ನಾಪೋಕ್ಲು, ಪಣಂಬೂರು, ಮಾಣಿ, ಶಾಹಪುರ, ಗಬ್ಬೂರು, ಕಳಸ, ಹಾರಂಗಿ, ರಾಮನಗರ, ಮಾಗಡಿ, ಚನ್ನಪಟ್ಟಣ, ಸೋಮವಾರಪೇಟೆ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.
ಬೆಂಗಳೂರು ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಬಿರುಗಾಳಿ ಸಹಿತ ಮಳೆ
ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 30.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ