AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮಳೆ

ಕರ್ನಾಟಕದ 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Nov 10, 2024 | 8:20 AM

Share

ಕರ್ನಾಟಕದ 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎರಡು ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳಲಿದ್ದು, ತಮಿಳುನಾಡು, ಶ್ರೀಲಂಕಾ ಕರಾವಳಿ ಕಡೆಗೆ ಚಲಿಸಲಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ

ಹೊನ್ನಾವರದಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗದಗದಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!