AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಸುರಿಯಲಿದೆ ಭಾರಿ ಮಳೆ, ಯೆಲ್ಲೋ ಅಲರ್ಟ್

ಕರ್ನಾಟಕದ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.ಮಂಗಳೂರು, ಸಿದ್ದಾಪುರ, ಕದ್ರಾ, ಉಡುಪಿ, ಮಂಕಿ, ಯಲ್ಲಾಪುರ, ಬೆಳ್ತಂಗಡಿ, ಸುಳ್ಯ, ಅಡಕಿ, ನಿಪ್ಪಾಣಿ, ಸಂಕೇಶ್ವರ, ಕಮ್ಮರಡಿ, ಜಯಪುರ, ಕಳಸದಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಸುರಿಯಲಿದೆ ಭಾರಿ ಮಳೆ, ಯೆಲ್ಲೋ ಅಲರ್ಟ್
ಮಳೆ Image Credit source: PTI
ನಯನಾ ರಾಜೀವ್
|

Updated on: Jul 02, 2025 | 7:19 AM

Share

ಬೆಂಗಳೂರು, ಜುಲೈ 2: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ(Rain)ಯ ಪ್ರಮಾಣ ಹೆಚ್ಚಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಕ್ಯಾಸಲ್​​ರಾಕ್, ಮೂಡುಬಿದಿರೆ, ಗೇರುಸೊಪ್ಪ, ಹೊನ್ನಾವರ, ಚಿಂಚೋಳಿ, ಬೀದರ್, ಸೋಮವಾರಪೇಟೆ, ಆಗುಂಬೆ, ಭಾಗಮಂಡಲ, ಕೊಟ್ಟಿಗೆಹಾರ, ಶೃಂಗೇರಿ, ಲೋಂಡಾ, ಕಲಬುರಗಿ, ಮಂಠಾಳ, ಹುಮ್ನಾಬಾದ್, ಭಾಲ್ಕಿ, ಪುತ್ತೂರು, ಕೋಟಾ, ಮಂಗಳೂರು, ಸಿದ್ದಾಪುರ, ಕದ್ರಾ, ಉಡುಪಿ, ಮಂಕಿ, ಯಲ್ಲಾಪುರ, ಬೆಳ್ತಂಗಡಿ, ಸುಳ್ಯ, ಅಡಕಿ, ನಿಪ್ಪಾಣಿ, ಸಂಕೇಶ್ವರ, ಕಮ್ಮರಡಿ, ಜಯಪುರ, ಕಳಸದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರಿಂದ ಭಾರಿ ಮಳೆ

ಬೆಂಗಳೂರಿನ ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 27.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು