Karnataka Rains: ಕರ್ನಾಟಕದ 9 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.

Karnataka Rains: ಕರ್ನಾಟಕದ 9 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ
ಮಳೆImage Credit source: Getty Images
Follow us
ನಯನಾ ರಾಜೀವ್
|

Updated on: Sep 18, 2024 | 7:42 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ, ಆದರೆ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೀದರ್​ನಲ್ಲಿ ಒಣಹವೆ ಇರಲಿದೆ.

ಪುತ್ತೂರು, ಕೋಟ, ಪಣಂಬೂರು, ಗೋಕರ್ಣ, ಅಂಕೋಲಾ, ಕಾರ್ಕಳ, ಕಾರವಾರ, ಮಂಕಿ, ಮಂಗಳೂರು, ಗೇರುಸೊಪ್ಪ, ಕುಮಟಾ, ಉಡುಪಿ,ಶಿರಾಲಿ, ಲಿಂಗನಮಕ್ಕಿ, ಶೃಂಗೇರಿ, ಸಿದ್ದಾಪುರ, ಸುಳ್ಯ, ಮೂಲ್ಕಿ, ಕುಂದಾಪುರ, ಧಾರವಾಡ, ಶಿರಹಟ್ಟಿ, ನರಗುಂದದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಸೆಪ್ಟೆಂಬರ್ 21ರಿಂದ ಕರ್ನಾಟಕದಾದ್ಯಂತ ಮತ್ತೆ ಮಳೆ ಶುರು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು