Karnataka Rains: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಚುರುಕು

ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ(Rain) ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13ರ ಬಳಿಕ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಮೂರು ದಿನಗಳ ಬಳಿಕ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಚುರುಕು
ಮಳೆ
Image Credit source: PTI

Updated on: Jun 09, 2025 | 7:28 AM

ಬೆಂಗಳೂರು, ಜೂನ್ 9: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ(Rain) ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13ರ ಬಳಿಕ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಮೂರು ದಿನಗಳ ಬಳಿಕ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರದಲ್ಲಿ ಬುಧವಾರದಿಂದ ಮಳೆ ಹೆಚ್ಚಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕದ್ರಾ, ಕಾರ್ಕಳ, ಗದಗ, ಭಾಲ್ಕಿ, ಹುಮ್ನಾಬಾದ್, ಗುರುಮಿಟ್ಕಲ್, ಚಿಕ್ಕೋಡಿ, ರಾಯಚೂರು, ಮಂಗಳೂರು, ಗೇರುಸೊಪ್ಪದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ, ಆರೆಂಜ್ ಅಲರ್ಟ್​

ಎಚ್​​ಎಎಲ್​​ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us