Karnataka Rains: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಒಂದು ವಾರ ಮಳೆ
ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಈ ವಾರ ಪೂರ್ತಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸೋಮವಾರ ಬಂಡೀಪುರ, ಎಂಎಂಹಿಲ್ಸ್ ಹಾಗೂ ಶಿರಸಿಯಲ್ಲಿ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು, ಏಪ್ರಿಲ್ 08: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಒಂದು ವಾರಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರಿನಲ್ಲಿ ಒಣಹವೆ ಇರಲಿದ್ದು, ಮೋಡಕವಿದ ವಾತಾವರಣವಿರುತ್ತದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಇಂದು ಹೆಚ್ಚಿನ ಮಳೆಯಾಗಲಿದೆ. ಸೋಮವಾರ ಬಂಡೀಪುರ, ಶಿರಸಿಯ ಕೆಲವು ಪ್ರದೇಶಗಳು, ಎಂಎಂಹಿಲ್ಸ್ನಲ್ಲಿ ಮಳೆಯಾಗಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಏಪ್ರಿಲ್ 13ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಹೊನ್ನಾವರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:27 am, Tue, 8 April 25