Karnataka Rains Highlights Updates: ಗುಡ್ಡ ಕುಸಿತ: ಶಿರಾಡಿಘಾಟ್​​ನಲ್ಲಿ ಸಂಚಾರ ಸಂಪೂರ್ಣ ಬಂದ್

ವಿವೇಕ ಬಿರಾದಾರ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 31, 2024 | 11:08 PM

ಕರ್ನಾಟಕ ಮಳೆ, ಹವಾಮಾನ, ನೆರೆ ಮತ್ತು ಪ್ರವಾಹ ಲೈವ್​ ವರದಿ: ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಜಲ ಕಂಟಕದಿಂದ ಅನೇಕ ಕುಟುಂಬಗಳು ಬೀದಿ ಪಾಲಾಗಿವೆ. ನರೆ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆಯಿಂದ ರಾಜ್ಯದ ನದಿಗಳಿಗೆ ಭಾರಿ ಒಳಹರಿವು ಇದೆ. ಇದರಿಂದ ಪ್ರವಾಹ ಪರಿಸ್ಥತಿ ಎದುರಾಗಿದೆ. ನಿರಂತರ ಮಳೆಯಿಂದಾಗಿ ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಮಳೆಯಿಂದ ರಾಜ್ಯದಲ್ಲಿ ಸಂಭವಿಸುವ ಘಟನೆಗಳ ಕುರಿತಾದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

Karnataka Rains Highlights Updates: ಗುಡ್ಡ ಕುಸಿತ: ಶಿರಾಡಿಘಾಟ್​​ನಲ್ಲಿ ಸಂಚಾರ ಸಂಪೂರ್ಣ ಬಂದ್
ಗುಡ್ಡ ಕುಸಿತ: ಶಿರಾಡಿಘಾಟ್​​ನಲ್ಲಿ ಸಂಚಾರ ಸಂಪೂರ್ಣ ಬಂದ್

ಕರ್ನಾಟಕದ ಮಲೆನಾಡು ಭಾಗ ಮತ್ತು ಕೇರಳದಲ್ಲಿ (Kerala) ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ನದಿಗಳು ಉಕ್ಕೇರಿ ಹರಿಯುತ್ತಿವೆ. ಜಲಾಶಯಗಳಿಗೆ ಭಾರಿ ಪ್ರಮಾಣದ ಹರಿದುಬರುತ್ತಿದೆ. ನಿರಂತರ ಮಳೆಯಿಂದಾಗಿ ಶಿರಾಡಿ, ಚಿಕ್ಕಮಗಳೂರು, ಚಾರ್ಮಾಡಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಸೇರಿ ವಿವಿಧೆಡೆ 10ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ ಸಂಭವಿಸಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಕೃಷ್ಣಾ ಹಾಗೂ ಅದರ ಹಲವು ಉಪನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಗೋಕಾಕ್‌ನಲ್ಲಿ 800 ಮನೆಗಳು ಮುಳುಗಡೆಯಾಗಿವೆ. ಬಾಗಲಕೋಟೆ ಜಿಲ್ಲೆಯಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಇದರಿಂದ ಜನರು ಹೈರಾಣಾಗಿದ್ದಾರೆ. ಆರೈಕೆ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ರಾಜ್ಯ ಮತ್ತು ನೆರೆ ರಾಜ್ಯಗಳಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಇದರಿಂದ ಜಲ ಕಂಟಕ ಎದುರಾಗಿದೆ. ಮಳೆಯಿಂದ ರಾಜ್ಯದಲ್ಲಿ ಸಂಭವಿಸುವ ಘಟನೆಗಳ ಕುರಿತಾದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

LIVE NEWS & UPDATES

The liveblog has ended.
  • 31 Jul 2024 11:07 PM (IST)

    Karnataka Rains Live Updates: ಮಳೆಗೆ ಧರೆಗುರುಳಿದ ಮರಗಳು

    ಬೆಂಗಳೂರಿನಲ್ಲಿ ಸಂಜೆ ಸುರಿದ ಮಳೆಗೆ ಮರಗಳು ಧರೆಗುರುಳಿವೆ. ಪುಲಕೇಶಿನಗರ, ಇಂದಿರಾನಗರ ಸೇರಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಪುಲಕೇಶಿನಗರದ M.M.ರಸ್ತೆಯಲ್ಲಿ ಕಾರಿನ ಮೇಲೆ ಮರ ಬಿದ್ದಿದೆ.

  • 31 Jul 2024 10:38 PM (IST)

    Karnataka Rains Live Updates: ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್

    ಹಾಸನ: ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಹಿನ್ನೆಲೆ ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್​ ಮಾಡಲಾಗಿದೆ. ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ‌ ಆದೇಶ ಹೊರಡಿಸಿದ್ದಾರೆ. ಮಳೆ‌ ಸುರಿಯುತ್ತಿರುವುದರಿಂದ ಮತ್ತೆ ಭೂಕುಸಿತ ಆತಂಕ ಎದುರಾಗಿದೆ.

  • 31 Jul 2024 09:52 PM (IST)

    Karnataka Rains Live Updates: ನಿಮಿಷಾಂಭ ದೇವಸ್ಥಾನ ಜಲಾವೃತ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಅಪಾಯದ ಮಟ್ಟ ಮೀರಿ ಕಾವೇರಿ ನದಿ ಹರಿಯುತ್ತಿದೆ. ಕಾವೇರಿ ನದಿಗೆ 1.72 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಗಂಜಾಂ ಬಳಿಯ ನಿಮಿಷಾಂಭ ದೇವಸ್ಥಾನ ಜಲಾವೃತವಾಗಿದೆ.

  • 31 Jul 2024 08:56 PM (IST)

    Karnataka Rains Live Updates: ಮಳೆಗೆ ಧರೆಗುರುಳಿದ ಬೃಹತ್ ಮರ: ಎರಡು ಕಾರು, ಒಂದು ಆಟೋ ಜಖಂ

    ಬೆಂಗಳೂರು: ಸಂಜೆ ಸುರಿದ ಮಳೆಗೆ ಬೃಹತ್ ಮರ ಧರೆಗುರುಳಿದ್ದು, ಎರಡು ಕಾರು, ಒಂದು ಆಟೋ ಜಖಂಗೊಂಡಿರುವಂತಹ ಘಟನೆ ಪೊಲೀಸ್ ಕಮೀಷನರ್ ಕಚೇರಿ ಹಿಂಭಾಗದಲ್ಲಿ ನಡೆದಿದೆ. ರಸ್ತೆ ಬದಿ ಪಾರ್ಕ್ ಮಾಡಿದ ಎರಡು ಕಾರು ಹಾಗೂ ಚಲಿಸುತ್ತಿದ್ದ ಆಟೋ ಜಖಂ ಆಗಿದೆ. ಸ್ಥಳಕ್ಕೆ ಬಿಬಿಎಂಪಿ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು, ಸಿಬ್ಬಂದಿಗಳು ಮರ ತೆರವುಗೊಳಿಸುತ್ತಿದ್ದಾರೆ.

  • 31 Jul 2024 07:57 PM (IST)

    Karnataka Rains Live Updates: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ವಾಹನಗಳು

    ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ. ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಚಾಲಕ ಸಿಲುಕಿದ್ದಾನೆ. ಸಂಜೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.

  • 31 Jul 2024 07:08 PM (IST)

    Karnataka Rains Live Updates: ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಗೆ ಮತ್ತೆ ಗುಡ್ಡ ಕುಸಿತ

    ಹಾಸನ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಪರಿಣಾಮ ಭಾರಿ ಮಳೆಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್​ನಲ್ಲಿ ಘಟನೆ ನಡೆದಿದ್ದು, ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ.

  • 31 Jul 2024 06:48 PM (IST)

    Karnataka Rains Live Updates: ವರುಣನ ಎಂಟ್ರಿಗೆ ವಾಹನ ಸವಾರರ ಪರದಾಟ

    ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ವರುಣನ ಅಬ್ಬರಿಸಿದ್ದು, ಹಲವೆಡೆ ಮಳೆ ಆರಂಭವಾಗಿದೆ. ವರುಣನ ಎಂಟ್ರಿಗೆ ವಾಹನ ಸವಾರರು ಪರದಾಡಿದ್ದು, ಕೆಲದಿನಗಳ ಬ್ರೇಕ್ ಬಳಿಕ ಮಳೆರಾಯ ಮತ್ತೆ ಅಬ್ಬರಿಸುತ್ತಿದ್ದಾನೆ.

  • 31 Jul 2024 05:59 PM (IST)

    Karnataka Rains Live Updates: ಬೆಂಗಳೂರಿನ ಹಲವೆಡೆ ಮಳೆ ಆರಂಭ

    ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಆರಂಭವಾಗಿದೆ. ಶಾಂತಿನಗರ, ವಿಲ್ಸಾನ್ ಗಾರ್ಡಾನ್, ಡಬಲ್ ರೋಡ್, ರಿಚ್ಮಂಡ್ ಸರ್ಕಲ್, ವಿಧಾನಸೌಧ, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಹೈಗ್ರೌಂಡ್ಸ್ ವಿಜಯನಗರ, ರಾಜಾಜಿನಗರ, ಮೈಸೂರು ರಸ್ತೆಯಲ್ಲಿ ಸುತ್ತ-ಮುತ್ತ ಜೋರು ಮಳೆ‌ ಸುರಿಯುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ.

  • 31 Jul 2024 05:12 PM (IST)

    Karnataka Rains Live Updates: 2.5 ಲಕ್ಷ ರೂ ಪರಿಹಾರದ ಜೊತೆಗೆ ಹೊಸ ಮನೆ

    ನದಿಗಳ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಸಚಿವ ಕೃಷ್ಣಭೈರೇಗೌಡ ಗುಡ್​ ನ್ಯೂಸ್ ನೀಡಿದ್ದಾರೆ. 2.5 ಲಕ್ಷ ರೂ. ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿಕೊಡುತ್ತೇವೆ. ಈ ಸಂಬಂಧ ಶೀಘ್ರವೇ ನಾವು ಆದೇಶವನ್ನು ಹೊರಡಿಸುತ್ತೇವೆ ಎಂದು ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಹೇಳಿದ್ದಾರೆ.

  • 31 Jul 2024 04:30 PM (IST)

    Karnataka Rains Live Updates: ತುಂಗಭದ್ರಾ ನದಿ ನೀರಿನ ಪ್ರಮಾಣ ಮತ್ತೆ ಏರಿಕೆ

    ಕೊಪ್ಪಳ: ಮಲೆನಾಡಿನಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಭದ್ರಾ ನದಿ ನೀರಿನ ಪ್ರಮಾಣ ಮತ್ತೆ ಏರಿಕೆಯಾಗಿದೆ. ತುಂಗಭದ್ರಾ ಜಲಾಶಯದಿಂದ ನದಿಗೆ ಈಗ 1.39 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ. ಇಂದು ಮುಂಜಾನೆ 55584 ಕ್ಯೂಸೆಕ್ ನೀರು ಬಿಡಲಾಗಿತ್ತು. ಸಂಜೆಯ ವೇಳೆಗೆ ಹೊರಹರಿವಿನ ಪ್ರಮಾಣ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.

  • 31 Jul 2024 04:04 PM (IST)

    Karnataka Rains Live Updates: ಪ್ರವಾಹ ಪೀಡಿತ ಪ್ರದೇಶಕ್ಕೆ ಬಿಜೆಪಿ ತಂಡ ಭೇಟಿ

    ಯಾದಗಿರಿ: ಕೃಷ್ಣ ನದಿ ನೀರಿನಿಂದ ಯಾದಗಿರಿಯಲ್ಲಿ ಪ್ರವಾಹ ಹಿನ್ನಲೆ ಪ್ರವಾಹ ಪೀಡಿತ ಪ್ರದೇಶಕ್ಕೆ ಪರಿಷತ್ ವಿಪಕ್ಷ ನಾಯಕ ಚಲುವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ಭೇಟಿ ಮಾಡಿದೆ. ಜಿಲ್ಲೆಯ ಶಹಾಪುರ‌ ತಾಲೂಕಿನ ಕೊಳ್ಳೂರು ಬಳಿಯ ಸೇತುವೆ ವಿಕ್ಷಣೆ ಮಾಡಲಾಗಿದೆ.

  • 31 Jul 2024 03:26 PM (IST)

    Karnataka Rains Live Updates: ಕಾವೇರಿ, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ

    ಮೈಸೂರು: KRS, ಕಬಿನಿ ಜಲಾಶಯದಿಂದ ಭಾರಿ ಪ್ರಮಾಣದ ನೀರು ನದಿಗೆ ಬಿಟ್ಟ ಹಿನ್ನೆಲೆ ಕಾವೇರಿ, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ನಂಜನಗೂಡು, ಟಿ.ನರಸೀಪುರ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಟಿ.ನರಸೀಪುರ ತಾಲೂಕಿನ ತಡಿಮಾಲಂಗಿ ಗ್ರಾಮಕ್ಕೆ ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ ನೀಡಿದ್ದಾರೆ.

  • 31 Jul 2024 02:34 PM (IST)

    Karnataka Rains Live Updates: ಶಿವಮೊಗ್ಗ: ತುಂಗಾ, ಭದ್ರಾ ಸಂಗಮ ಕ್ಷೇತ್ರದ ಸ್ನಾನಘಟ್ಟ ಮುಳುಗಡೆ

    ಶಿವಮೊಗ್ಗ ಜಿಲ್ಲೆ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನದಿಗಳು ಮೈದುಂಬಿ ಹರಿಯುತ್ತಿವೆ. ತುಂಗಾ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿರುವ ಸ್ನಾನಘಟ್ಟ ಮುಳುಗಡೆಯಾಗಿದೆ.

  • 31 Jul 2024 01:04 PM (IST)

    Karnataka Rains Live Updates: ಮುಧೋಳ-ಯಾದವಾಡ ಸೇತುವೆ ಮುಳುಗಡೆ

    ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಬಾಗಲಕೋಟೆ ಜಿಲ್ಲೆ ಮುಧೋಳ ‌ನಗರದ ಬಳಿಯ ಮುಧೋಳ ಯಾದವಾಡ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ 7 ಅಡಿಯಷ್ಟು ನೀರು ಹರಿಯುತ್ತಿದೆ.

  • 31 Jul 2024 12:17 PM (IST)

    Karnataka Rains Live Updates: ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ಸಂಚಾರ ಬಂದ್

    ಕೇರಳ ರಾಜ್ಯದ ವಯನಾಡಿನಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ಸಂಚಾರ ಬಂದ್ ಮಾಡಲಾಗಿದೆ. ಕಪಿಲಾ ನದಿ ತೀರದಲ್ಲಿರುವ ಶ್ರೀಬಸವೇಶ್ವರ ದೇವಾಲಯ, ಲಿಂಗಭಟ್ಟರ ಗುಡಿ, ಕಾಶಿ ವಿಶ್ವನಾಥಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪಸ್ವಾಮಿ, ದತ್ತಾತ್ರೇಯಸ್ವಾಮಿ, ಪರಶುರಾಮ ದೇವಾಲಯ ಸಂಪೂರ್ಣ ಜಲಾವೃತಗೊಂಡಿದೆ. ದೇವಾಲಯದ ಸುತ್ತಮುತ್ತ ಮುಡಿಕಟ್ಟೆ, ಸೋಪಾನಕಟ್ಟೆ, ದಾಸೋಹ ಭವನ ಸೇರಿದಂತೆ ದೇವಸ್ಥಾನದ ಪಾರ್ಕಿಂಗ್, ನೂತನ ಶ್ರೀಕಂಠೇಶ್ವರ ಮಂಗಳಮಂಟಪ ಕಲ್ಯಾಣ ಮಂಟಪ, ಹಳ್ಳದ ಕೇರಿಯಲ್ಲಿನ ಕೆಲವು ಮನೆಗಳು ಜಲಾವೃತಗೊಂಡಿವೆ.

  • 31 Jul 2024 11:37 AM (IST)

    Karnataka Rains Live Updates: ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ

    ಚಿಕ್ಕಮಗೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಆನೆಗುಂದಿ ಬಳಿಯ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ 169 ಶಿವಮೊಗ್ಗ-ಶೃಂಗೇರಿ-ಮಂಗಳೂರಿಗೆ ಸಂಪರ್ಕ ಕಲ್ಪಿಸುತ್ತದೆ. ಗುಡ್ಡ ಕುಸಿತದ ರಸ್ತೆಯಲ್ಲೇ ವಾಹನಗಳು ಸಂಚರಿಸುತ್ತಿವೆ. ಗುಡ್ಡ ಕುಸಿಯುತ್ತಿದ್ದರು ಜಿಲ್ಲಾಡಳಿತ ಮಾತ್ರ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ.

  • 31 Jul 2024 11:12 AM (IST)

    Karnataka Rains Live Updates: ನೇತ್ರಾವತಿ ನದಿಯಲ್ಲಿ ಒಳಹರಿವು ಹೆಚ್ಚಳ, ನದಿ ಪಾತ್ರದ ಜನರಿಗೆ ಎಚ್ಚರಿಕೆ ಗಂಟೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ನೇತ್ರಾವತಿ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ನೇತ್ರಾವತಿ ನದಿಗೆ ನೀರಿನ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಉಳ್ಳಾಲದ ಹರೇಕಳದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಜಲಾಯದ ಎಲ್ಲ ಸದ್ಯ ಡ್ಯಾಂ ನ ಎಲ್ಲ ಗೇಟ್​ಗಳನ್ನು ಓಪನ್ ಮಾಡಲಾಗಿದೆ. ನೀರು ಹೆಚ್ಚಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ‌ ನೀಡಿದೆ. ನದಿ-ಸಮುದ್ರದ ಬಳಿ ತೆರಳದಂತೆ ಆದೇಶ ಹೊರಡಿಸಿದೆ.

  • 31 Jul 2024 10:32 AM (IST)

    Karnataka Rains Live Updates: ಚಿಕ್ಕಮಗಳೂರು ಪ್ರವಾಸ ಮುಂದೂಡಿ, ಜಿಲ್ಲಾಡಳಿತ ಮನವಿ

    ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15 ರ ವರೆಗೂ ಪ್ರವಾಸಕ್ಕೆ ಬಾರದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳು ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸ ಬರುವುದನ್ನು ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ.

  • 31 Jul 2024 10:00 AM (IST)

    Karnataka Rains Live Updates: ಗೋಕಾಕ್ ಬಳಿಯ ಲೋಳಸೂರು ಸೇತುವೆ ಓಪನ್​​

    ಬೆಳಗಾವಿ: ಘಟಪ್ರಭಾ ನದಿಯ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಗೋಕಾಕ್ ಬಳಿಯ ಲೋಳಸೂರು ಸೇತುವೆ ಮೇಲಿನ ನೀರು ಕಡಿಮೆಯಾಗಿದೆ. ಆದರೆ, ಇನ್ನೂ ಸಂಚಾರಕ್ಕೆ ಮುಕ್ತವಾಗಿಲ್ಲ.  ರಸ್ತೆಗೆ ಹಾನಿಯಾಗಿದ್ದು, ಸೇತುವೆ ಪರಿಶೀಲನೆಗೆ ತಹಶಿಲ್ದಾರ ಮುಂದಾಗಿದ್ದಾರೆ.  ಸ್ಥಳಕ್ಕೆ ತಹಶಿಲ್ದಾರ ಡಾ.ಮೋಹನ್ ಬಸ್ಮೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

  • 31 Jul 2024 09:27 AM (IST)

    Karnataka Rains Live Updates: ಹಾಸನದ ಶಿರಾಡಿಘಾಟ್​ನಲ್ಲಿ ಸಂಚಾರ ಆರಂಭ

    ಗುಡ್ಡ ಕುಸಿತದಿಂದ ಬಂದ್​ ಆಗಿದ್ದ ಹಾಸನದ ಶಿರಾಡಿಘಾಟ್​ನಲ್ಲಿ ಸಂಚಾರ ಆರಂಭವಾಗಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಗುಡ್ಡ ಕುಸಿದಿತ್ತು. ಕೂಡಲೆ ಕಾರ್ಯಪ್ರವೃಹತವಾದ ಜಿಲ್ಲಾಡಳಿತ ಸತತ 10-12 ಗಂಟೆ ಕಾರ್ಯಾಚರಣೆ ನಡೆಸಿ ಮಣ್ಣು ತೆರವು ಮಾಡಿದೆ. ಇದರಿಂದ ರಸ್ತೆ ಸಂಚರಿಸಲು ಮುಕ್ತವಾಗಿದೆ. ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲ ಕೆಸರುಮಯವಾಗಿದೆ. ಟ್ರಕ್​ವೊಂದು ಕೆಸರಿನಲ್ಲಿ ಸಿಲುಕಿತ್ತು. ನಿಧಾನಗತಿ ಸಂಚಾರದಿಂದ ರಸ್ತೆಯ ಎರಡೂ ಬದಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

  • 31 Jul 2024 09:21 AM (IST)

    Karnataka Rains Live Updates: ಭಾರಿ ಮಳೆ ಪ್ರವಾಹಕ್ಕೆ ಕುಶಾಲನಗರ ಪಟ್ಟಣ ತತ್ತರ

    ಕೊಡಗು: ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡಿದ್ದರಿಂದ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ, ಬಸಪ್ಪ ಬಡಾವಣೆ, ಗಂಧದಕೋಟೆ ಮುಳುಗಡೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮಧ್ಯರಾತ್ರಿ ಸಂತ್ರಸ್ತರನ್ನು ರಕ್ಷಿಸಿದ್ದಾರೆ. ಕುಶಾಲನಗರದಲ್ಲಿ ಹಲವು ಬಡಾವಣೆಗಳು ಮುಳುಗಿವೆ.

  • 31 Jul 2024 08:40 AM (IST)

    Karnataka Rains Live Updates: ಭದ್ರಾವತಿ ನಗರ KSRTC ಬಸ್ ನಿಲ್ದಾಣದ ಬಳಿಯ ಹೊಸ ಸೇತುವೆ ಮುಳುಗಡೆ

    ಭದ್ರಾ ಡ್ಯಾಂನಿಂದ 41 ಸಾವಿರ ಕ್ಯೂಸೆಕ್​ ನೀರು ‌ಬಿಡುಗಡೆಯಾದ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಬಳಿಯ ಹೊಸ ಸೇತುವೆ ಮುಳುಗಡೆಯಾಗಿದೆ. ಸೇತುವೆ ಜಲಾವೃತ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸೇತುವೆಯ ಎರಡು ಕಡೆ ಬ್ಯಾರಿಕೇಡ್ ಪೊಲೀಸರು ಹಾಕಿ ನಿರ್ಬಂಧಿಸಿಸಲಾಗಿದೆ.

  • 31 Jul 2024 08:35 AM (IST)

    Karnataka Rains Live Updates: ಕೊಡಗಿನ ಪ್ರವಾಸಿ ತಾಣಗಳಿಗೆ 2 ದಿನ ಪ್ರವೇಶ ನಿಷೇಧ

    ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳು ಬುಧ ಮತ್ತು ಗುರುವಾರ ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.

  • Published On - Jul 31,2024 8:35 AM

    Follow us
    ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
    ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
    ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
    ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
    ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
    ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
    ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
    ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
    ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
    ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
    ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
    ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
    ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
    ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
    ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
    ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
    ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
    ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
    ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
    ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ