Karnataka Rains Highlights : ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ; ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Karnataka Rain and Flood in Madikeri, Uttara Kannada, Bengaluru Weather Live News Updates: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಗೆ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾಗಿದ್ದು, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದಿದೆ.

Karnataka Rains Highlights : ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ; ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 09, 2022 | 10:20 PM

Monsoon 2022: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಭಾಗದಲ್ಲಿ 3 ದಿನ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಲ್ಲಿ 5 ದಿನ ಯಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ 3 ದಿನ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ  ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ ಸುರಿಯುವ ಮುನ್ಸೂಚನೆ ನೀಡಿದ್ದಾರೆ. ಸಂಜೆ ವೇಳೆಗೆ ಗಾಳಿ ಸಹಿತ ಮಳೆಯಾಗುವ ಬಗ್ಗೆ ಮುನ್ಸೂಚನೆ ದೊರೆತಿದೆ.

ಕರ್ನಾಟಕದ ಕರಾವಳಿಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ಕೂಡ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್ (Orange Alert)​ ಘೋಷಿಸಿದ್ದು, ಬೆಳಗಾವಿ, ಕಲಬುರ್ಗಿ, ಬೀದರ್​​ನಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಗೆ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾಗಿದ್ದು, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದಿದೆ.

ಇದನ್ನೂ ಓದಿ: Karnataka Rain: ಮಳೆಯ ಆರ್ಭಟಕ್ಕೆ ಕರ್ನಾಟಕ ತತ್ತರ; ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ

ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಬೃಹದಾಕಾರ ಕಲ್ಲು, ಮಣ್ಣು, ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಗುಡ್ಡ ಕುಸಿತ ತೆರವು ಕಾರ್ಯಕ್ಕೆ ಜಿಲ್ಲಾಡಳಿತ ಹೈರಾಣಾಗಿದ್ದು, ಜಿಲ್ಲೆಯಲ್ಲಿ ಅಣಸಿ, ಅರಬೈಲ್, ದೇವಿಮನಿ ಘಾಟ್ ಕುಸಿಯುವ ಆತಂಕ ಉಂಟಾಗಿದೆ. ಜಿಲ್ಲೆಯಲ್ಲಿ ರೆಡ್ ಅಲಟ್೯ ಘೋಷಣೆ ಮಾಡಿದ್ದು, ಶರಾವತಿ, ಕಾಳಿ, ಅಘನಾಶಿನಿ, ಗಂಗಾವಳಿ ನದಿಗಳು ಉಕ್ಕಿ ಹರಿಯುತ್ತಿವೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದ ಅಮರನಾಥ ಗುಹೆ ಬಳಿ ಮೇಘ ಸ್ಫೋಟ: ಮೈಸೂರಿನ ಆರು ಪ್ರವಾಸಿಗರು ಸೇಫ್

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ವಿಜಯಪುರ ‌ನಗರ, ಗ್ರಾಮೀಣ ಭಾಗದಲ್ಲಿ ಬೆಳಗ್ಗೆ 6.21ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ವಿಜಯಪುರ ನಗರ, ವಿಜಯಪುರ ತಾಲೂಕಿನ ನಾಗಠಾಣ, ಅಲಿಯಾಬಾದ ಹಾಗೂ ತಿಕೋಟಾ ತಾಲೂಕಿನ ಘೋಣಸಗಿ, ಕಳ್ಳಕವಟಗಿ, ಸೋಮದೇವರಹಟ್ಟಿ ಸೇರಿ ಹಲವೆಡೆ ಕಂಪನ ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲಾಗಿದೆ.

Published On - 10:06 am, Sat, 9 July 22