AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ, ಉಳಿದೆಡೆ ಒಣಹವೆ

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ನಲ್ಲಿ ಒಣಹವೆ ಇರಲಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ, ಉಳಿದೆಡೆ ಒಣಹವೆ
ಮಳೆ Image Credit source: PTI
ನಯನಾ ರಾಜೀವ್
|

Updated on: Nov 06, 2025 | 7:47 AM

Share

ಬೆಂಗಳೂರು, ನವೆಂಬರ್ 06: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ನಲ್ಲಿ ಒಣಹವೆ ಇರಲಿದೆ.

ಚಿಂಚೋಳಿ, ಗಬ್ಬೂರು, ಗುರುಮಿಟ್ಕಲ್, ಮಧುಗಿರಿ, ಸೈದಾಪುರ, ಬರಗೂರು, ನಾಯಕನಹಟ್ಟಿ, ಪರಶುರಾಂಪುರ, ಸೇಡಂ, ಹಗರಿಬೊಮ್ಮನಹಳ್ಳಿ, ಜಯಪುರ, ಮಂಗಳೂರು, ಮುನಿರಾಬಾದ್​​ನಲ್ಲಿ ಮಳೆಯಾಗಿದೆ.

ಬೆಳಗಾವಿ ಏರ್ಪೋರ್ಟ್ನಲ್ಲಿ 16.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​​ಎಎಲ್ನಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:  Karnataka Weather Today: ರಾಜ್ಯದಲ್ಲಿಂದು ಸಾಧಾರಣ ಮಳೆಯ ಸಾಧ್ಯತೆ; ಹವಾಮಾನ ಇಲಾಖೆ ವರದಿ

ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 28.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್ಪೋರ್ಟ್​​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 25.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್