AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕಾಗುತ್ತಿದ್ದು, 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಮಳೆ
ಮಳೆImage Credit source: PTI
ನಯನಾ ರಾಜೀವ್
|

Updated on: Sep 11, 2024 | 7:42 AM

Share

ಕರ್ನಾಟಕದ ಈ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಹೊನ್ನಾವರ, ಕೊಟ್ಟಿಗೆಹಾರ, ಗೇರುಸೊಪ್ಪ, ಭಾಗಮಂಡಲ, ಮಂಕಿ, ಸುಳ್ಯ, ಕುಮಟಾ, ಕಾರವಾರ, ಶಿರಾಲಿ, ಕನಕಪುರ, ಕಮ್ಮರಡಿ, ಪೊನ್ನಂಪೇಟೆ, ಮಂಗಳೂರು, ಸಿದ್ದಾಪುರ, ಉಡುಪಿ, ಬೆಳ್ತಂಗಡಿ, ಕದ್ರಾ, ಜೋಯಿಡಾ, ಧರ್ಮಸ್ಥಳ, ಗೋಕರ್ಣ, ಕೋಟ, ನಾಪೋಕ್ಲು, ಲಿಂಗನಮಕ್ಕಿ, ಕೊಪ್ಪ, ಪುತ್ತೂರು, ಕಾರ್ಕಳ, ಯಲ್ಲಾಪುರ, ಮಾಣಿ, ಎನ್​ಆರ್​ಪುರ, ಮೂಡಿಗೆರೆ, ಸೋಮವಾರಪೇಟೆ, ಕುಂದಾಪುರ, ಸಿದ್ದಾಪುರ, ಉಪ್ಪಿನಂಗಡಿ, ಬನವಾಸಿ, ತ್ಯಾಗರ್ತಿ, ಶ್ರೀರಂಗಪಟ್ಟಣ, ಜಯಪುರ, ಸರಗೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿ ಹಲವೆಡೆ ಭಾರಿ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ತುಂತುರುಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.8 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ