Karnataka Rains: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಜತೆ ಗಾಳಿಯ ಅಬ್ಬರ ಜೋರು

|

Updated on: Jul 24, 2024 | 7:53 AM

ಕರ್ನಾಟಕದ ಬಹುತೇಕ ಕಡೆ ಈಗ ಗಾಳಿಯ ಅಬ್ಬರ ಜೋರಾಗಿದೆ, ಮಳೆ ಕೊಂಚ ಬಿಡುವು ಪಡೆದಿದೆ. ಇಂದಿನಿಂದ ಮಳೆಯ ಪ್ರಮಾನ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಜತೆ ಗಾಳಿಯ ಅಬ್ಬರ ಜೋರು
ಮಳೆ
Image Credit source: Triphobo
Follow us on

ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ವಿವಿಧೆಡೆ ಇಂದಿನಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ. ಆದರೆ ಮಂಗಳವಾರದಿಂದಲೇ ಗಾಳಿಯ ಅಬ್ಬರ ಶುರುವಾಗಿದೆ. ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರುನಗರದಲ್ಲಿ ಮಳೆಯಾಗಲಿದೆ.
ಕ್ಯಾಸಲ್​ರಾಕ್, ಸಿದ್ದಾಪುರ, ಲೋಂಡಾ, ಶಿರಾಲಿ, ಮಂಕಿ, ಗೋಕರ್ಣ, ಧರ್ಮಸ್ಥಳ, ಸಿದ್ದಾಪುರ, ಹೊನ್ನಾವರ, ಯಲ್ಲಾಪುರ, ಸೋಮವಾರಪೇಟೆ, ಕಮ್ಮರಡಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ.

ಸಿದ್ದಾಪುರ, ಲೋಂಡಾ, ಶಿರಾಲಿ, ಮಂಕಿ, ಗೋಕರ್ಣ, ಧರ್ಮಸ್ಥಳ, ಸಿದ್ದಾಪುರ, ಹೊನ್ನಾವರ, ಯಲ್ಲಾಪುರ, ಸೋಮವಾರಪೇಟೆ, ಕಾರ್ಕಳ, ತ್ಯಾಗರ್ತಿ, ಕಳಸ, ಜೋಯಿಡಾ, ಕೊಟ್ಟಿಗೆಹಾರ, ಶೃಂಗೇರಿ, ಸಂಕೇಶ್ವರ, ಪೊನ್ನಂಪೇಟೆ, ಜಯಪುರ, ಬಾಳೆಹೊನ್ನೂರು, ಎನ್​ಆರ್​ ಪುರ, ಹಿರೇಕೆರೂರು, ಕಲಘಟಗಿ, ಸೇಡಬಾಳ, ಹುಬ್ಬಳ್ಳಿ, ಹಾಸನ, ಸರಗೂರು, ಅರಕಲಗೂಡು, ಚನ್ನಗಿರಿ, ಭದ್ರಾವತಿ, ಗುಂಡ್ಲುಪೇಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ನಾಳೆಯಿಂದ ಕೊಂಚ ಕಡಿಮೆಯಾಗಲಿದೆ ಮಳೆಯ ಅಬ್ಬರ

ಹೊನ್ನಾವರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:53 am, Wed, 24 July 24