Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ, ಆರೆಂಜ್ ಅಲರ್ಟ್​

ಕರ್ನಾಟಕದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ದೊರೆತಿದೆ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಪ್ರತಿ ವರ್ಷವೂ ಚೌತಿಯಷ್ಟೊತ್ತಿಗೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿತ್ತು ಆದರೆ ಈ ಬಾರಿ ಚೌತಿ ಕಳೆದರೂ ಮಳೆ ಹೆಚ್ಚಾಗುವ ಸೂಚನೆ ಇದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ, ಆರೆಂಜ್ ಅಲರ್ಟ್​
ಮಳೆImage Credit source: Financial Express
Follow us
ನಯನಾ ರಾಜೀವ್
|

Updated on: Sep 09, 2024 | 7:34 AM

ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ,ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಸೇಡಂ,ಗೇರುಸೊಪ್ಪ, ಮಾಣಿ, ಕದ್ರಾ, ಕಾರವಾರ, ಸೈದಾಪುರ, ಖಜೂರಿ, ಶಿರಾಲಿ, ಸಿದ್ದಾಪುರ, ಧರ್ಮಸ್ಥಳ, ಮಂಕಿ, ಗಬ್ಬೂರು, ಕಲಬುರಗಿ, ಚಿತ್ತಾಪುರ, ಔರಾದ್, ಬನವಾಸಿ, ಪುತ್ತೂರು, ಜೋಯಿಡಾ, ಕುಮಟಾ, ಮಂಠಾಳ, ಕುಂದಾಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಮಳೆ

ಹೊನ್ನಾವರ, ಕೋಟ, ಉಡುಪಿ, ಹೊನ್ನಾವರ, ಭಾಲ್ಕಿ, ಕಕ್ಕೇರಿ, ಶಾಹಪುರ, ಬಾದಾಮಿ, ಕುಣಿಗಲ್, ಗುಬ್ಬಿ, ಹುಂಚದಕಟ್ಟೆ, ಕೊಪ್ಪ, ಜಯಪುರ, ಲಿಂಗನಮಕ್ಕಿ, ದಾವಣಗೆರೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು