ಉತ್ತರ ಕನ್ನಡ, ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ: ಮಲೆನಾಡು, ಕರಾವಳಿಯಲ್ಲಿ 3 ಸಾವು

ಕರಾವಳಿ ಕರ್ನಾಟಕ, ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ವರ್ಷಧಾರೆ ಮುಂದುವರಿದಿದ್ದು, ಮಳೆ ಸಂಬಂಧಿ ಅವಘಡಗಳಿಂದ ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದಾರೆ. ಕಣ್ಣು ಹಾಯಿಸಿದಲ್ಲೆಲ್ಲ ನೀರು, ಕುತ್ತಿಗೆವರೆಗೂ ನೀರು ತುಂಬಿ ಹರಿಯುತ್ತಿರುವ ಪ್ರದೇಶಗಳು, ಅದರಲ್ಲೇ ಓಡಾಡಲು ಹರಸಾಹಸ ಪಡುವ ಜನರು, ಬೆಳೆದ ಬೆಳೆ ನೀರುಪಾಲಾಗಿರುವ ದೃಶ್ಯ ಎಲ್ಲೆಡೆ ಕಾಣತೊಡಗಿದೆ.

ಉತ್ತರ ಕನ್ನಡ, ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ: ಮಲೆನಾಡು, ಕರಾವಳಿಯಲ್ಲಿ 3 ಸಾವು
ಉಡುಪಿಯ ಬ್ರಹ್ಮಾವರ ತಾಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗು ಪ್ರದೇಶಗಳು ಜಲಾವೃತಗೊಂಡಿರುವುದು
Follow us
Ganapathi Sharma
|

Updated on: Jul 05, 2024 | 6:54 AM

ಬೆಂಗಳೂರು, ಜುಲೈ 5: ಉತ್ತರ ಕನ್ನಡ, ಕರಾವಳಿ ಕರ್ನಾಟಕದ ಜಿಲ್ಲೆಗಳು ಹಾಗೂ ಮಲೆನಾಡು ವ್ಯಾಪ್ತಿಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಉಡುಪಿಯಲ್ಲಿ ಭಾರಿ ಮಳೆಗೆ ಮೊದಲ ಬಲಿಯಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡ ಎಂಬಲ್ಲಿ ಗುಡ್ಡ ಕುಸಿದು ಹಳ್ಳಿ ಬೇರು ನಿವಾಸಿ ಅಂಬಾ ಎಂಬಾಕೆ ಮೃತಪಟ್ಟಿದ್ದಾರೆ. ಇತ್ತ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೈಸೆ ಗ್ರಾಮದಲ್ಲಿ ಗದ್ದೆಗೆ ಹೋಗುತ್ತಿದ್ದ ಮಹಿಳೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಬಳಿ ನದಿಗೆ ಮೀನು ಹಿಡಿಯಲು ಹೋದ ಮೈಕಲ್ ಎಂಬವರು ನೀರು ಪಾಲಾಗಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ 167 ಮಿಮೀ ಮಳೆ ಆಗಿದ್ದು, ನದಿಗಳೆಲ್ಲಾ ಭೋರ್ಗರೆಯುತ್ತಿವೆ. ಗಂಗಾವಳಿ ನದಿ ಅಬ್ಬರಕ್ಕೆ ಅಂಕೋಲ ತಾಲೂಕಿನ ಬಿಳೆಹೊಂಗಿ, ಮಂಜುಗುಣಿ, ಪಣಸಗೊಳಿ, ಹೊನ್ನೆಬೈಲು ಸೇರಿ 5ಕ್ಕೂ ಹೆಚ್ಚು ಗ್ರಾಮಗಳು ಸಂಪೂರ್ಣ ಜಲಾವೃತವಾಗಿ ಸಂಕಷ್ಟ ಎದುರಾಗಿದೆ.

ಉತ್ತರ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Karnataka Rains: Monsoon intensified in Uttara Kannada, coastal Karnataka cause 3 deaths, Kannada news

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಸುರಿದ ಮಳೆಗೆ ಓರ್ವ ಮಹಿಳೆ ಮತ್ತು ಜಾನುವಾರು ಸಾವನ್ನಪ್ಪಿವೆ. 92 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ ನೀಡಿದ್ದಾರೆ. ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡಕ್ಕೆ ಎನ್​ಡಿಆರ್​ಎಫ್ ಸಿಬ್ಬಂದಿ ರವಾನೆ

ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಿಗೆ ಮುಂಜಾಗ್ರತಾ ಕ್ರಮವಾಗಿ ಎನ್​ಡಿಆರ್​ಎಫ್​​ ಸಿಬ್ಬಂದಿ ರವಾನಿಸಲಾಗಿದೆ. ಇಂದು ಕಾರವಾರ, ಕುಮಟಾ, ಅಂಕೋಲಾಗೆ ಬೆಂಗಳೂರಿನಿಂದ ತೆರಳಿದ ಎನ್​ಡಿಆರ್​ಎಫ್​ ಸಿಬ್ಬಂದಿ ಭೇಟಿ ನೀಡಲಿದ್ದಾರೆ. 35 ಸಿಬ್ಬಂದಿಯ ಎರಡು ಎನ್​ಡಿಆರ್​ಎಫ್​ ತಂಡ ಕಳುಹಿಸಿಕೊಡಲಾಗಿದೆ.

Karnataka Rains: Monsoon intensified in Uttara Kannada, coastal Karnataka cause 3 deaths, Kannada news

ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಅಂತಾ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.

ಸುಂಟರಗಾಳಿ ಹೊಡೆತಕ್ಕೆ ನೆಲಕಚ್ಚಿದ ಅಡಕೆ ತೋಟ

ಉಡುಪಿಯ ರಟ್ಟಾಡಿಯಲ್ಲಿ ಭಾರಿ ಸುಂಟರಗಾಳಿ ಬೀಸಿ 40ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಸುಂಟರಗಾಳಿ ಹೊಡೆತಕ್ಕೆ 5 ಸಾವಿರಕ್ಕೂ ಅಧಿಕ ಅಡಕೆ ಮರಗಳು, 2 ಸಾವಿರ ರಬ್ಬರ್ ಮರಗಳು ಕೂಡ ಸರ್ವನಾಶವಾಗಿವೆ.

ಇದನ್ನೂ ಓದಿ: ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ಕರ್ನಾಟಕದ ಹಲವೆಡೆ ಭಾರಿ ಮಳೆ: ಪ್ರವಾಸಿ ತಾಣ, ಜಲಪಾತಗಳಿಗೆ ಪ್ರವೇಶ ನಿರ್ಬಂಧ

ಇತ್ತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಯಕ್ಷಗಾನ ಕಲಾವಿದ ನಂದನ್ ಶೆಟ್ಟಿ ಎಂಬುವವರ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿದ್ದಾಗ ಕುಟುಂಬದವರು ಹೊರಗೆ ಓಡಿ ಬಂದಿದ್ದಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್