Karnataka Rains: ಕರ್ನಾಟಕದ ಕರಾವಳಿಯಲ್ಲಿ ವರುಣನ ಆರ್ಭಟ ಜೋರು, ಜುಲೈ 12ರವರೆಗೂ ಭಾರಿ ಮಳೆ

ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಜುಲೈ 12ರವರೆಗೂ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಗೆಯೇ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಕೂಡ ಮಳೆಯಾಗಲಿದೆ.ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್​​ನಲ್ಲಿ ಕೂಡ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ವರುಣನ ಆರ್ಭಟ ಜೋರು, ಜುಲೈ 12ರವರೆಗೂ ಭಾರಿ ಮಳೆ
ಮಳೆ
Image Credit source: PTI

Updated on: Jul 06, 2025 | 7:51 AM

ಬೆಂಗಳೂರು, ಜುಲೈ 06: ಕರ್ನಾಟಕದ ಕರಾವಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆ(Rain)ಯಾಗಲಿದೆ. ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್​​ನಲ್ಲಿ ಕೂಡ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಭಾಗಮಂಡಲ, ಕುಂದಾಪುರ, ಸಿದ್ದಾಪುರ, ಕೋಟಾ, ಗೇರುಸೊಪ್ಪ, ಕೊಟ್ಟಿಗೆಹಾರ, ಕಮ್ಮರಡಿ, ಮೂಡುಬಿದಿರೆ, ಮುಲ್ಕಿ, ಲೋಂಡಾದಲ್ಲಿ ಭಾರಿ ಮಳೆಯಾಗಿದೆ. ಕಾರ್ಕಳ, ಕದ್ರಾ, ಶಿರಾಲಿ, ಉಡುಪಿ, ಮಂಗಳೂರು, ಯಲ್ಲಾಪುರ, ಧರ್ಮಸ್ಥಳ, ಬಂಟವಾಳ, ಕಳಸ, ಹುಂಚದಕಟ್ಟೆ, ಪಣಂಬೂರು, ಕೊಪ್ಪ, ನಾಪೋಕ್ಲು, ಕುಮಟಾ, ಬೆಳ್ತಂಗಡಿ, ಪುತ್ತೂರು, ಗೋಕರ್ಣ, ಕೆಂಭಾವಿ, ವಿರಾಜಪೇಟೆ, ಕಿರವತ್ತಿ, ಬಾಳೆಹೊನ್ನೂರು, ಕಿತ್ತೂರು, ಹಳಿಯಾಳ, ಇಳಕಲ್, ಮುಂಡಗೋಡು, ಬೆಳಗಾವಿ, ಗುರುಮಿಟ್ಕಲ್, ಕುರ್ಡಿ, ಧಾರವಾಡ, ಬೈಲಹೊಂಗಲ, ಮಧುಗಿರಿ, ಹಾರಂಗಿ, ಬೇಲೂರು, ಜಗಳೂರು, ಕೋಣನೂರು, ಶಿವಮೊಗ್ಗದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಹಾಸನ, ಶಿವಮೊಗ್ಗ ಸೇರಿ ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಇಂದು ಭಾರಿ ಮಳೆ

ಬೆಳಗಾವಿಯಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

​

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us