AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಹೆಚ್ಚಲಿದೆ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಹೆಚ್ಚಲಿದೆ ಮಳೆ, ಯೆಲ್ಲೋ ಅಲರ್ಟ್​
ಮಳೆImage Credit source: PTI
ನಯನಾ ರಾಜೀವ್
|

Updated on: Sep 22, 2024 | 8:05 AM

Share

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಕೂಡ ಮಳೆಯಾಗಲಿದೆ.

ಚಿಟಗುಪ್ಪ, ಉಡುಪಿ, ಹುಮನಾಬಾದ್, ಪಣಂಬೂರು, ಮಂಠಾಳ, ಮಾಣಿ, ಕೆಂಭಾವಿ, ಟಿಕ್ಕೋಟ, ಮೂಲ್ಕಿ, ಭಾಲ್ಕಿ, ವಿಜಯಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಶನಿವಾರ ಮಳೆಯಾಗಿದೆ, ಎಚ್​ಎಎಲ್​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಸೆಪ್ಟೆಂಬರ್ 24ರಿಂದ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮತ್ತೆ ಮಳೆ

ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ