AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 23ರವರೆಗೆ ಮಹಾ ಮಳೆ

ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ 23ರವರೆಗೆ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 23ರವರೆಗೆ ಮಹಾ ಮಳೆ
ಮಳImage Credit source: Mint
ನಯನಾ ರಾಜೀವ್
|

Updated on: May 19, 2024 | 8:07 AM

Share

ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಮೇ 23ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೇ 20ರಂದು ಕೂಡ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಗುಬ್ಬಿ, ಬೇಗೂರು,ಯಲ್ಲಾಪುರ,ಶ್ರವಣಬೆಳಗೊಳ, ಚನ್ನರಾಯಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಮದ್ದೂರು, ಚಿಕ್ಕಮಗಳೂರು,ಬಂಡೀಪುರ, ತುಮಕೂರು, ಕೂಡಲಸಂಗಮ, ಪೊನ್ನಂಪೇಟೆ, ವಿರಾಜಪೇಟೆ, ಶಿವಮೊಗ್ಗ, ಹೊಸದುರ್ಗ,ಹೊಸಕೋಟೆ, ಮಂಗಳೂರು, ಕಮ್ಮರಡಿ, ರಾಣೆಬೆನ್ನೂರು, ಮಂಡ್ಯ, ಕೃಷ್ಣರಾಜಪೇಟೆ, ಯುಗಟಿ, ಸಕಲೇಶಪುರ, ಮೂರ್ನಾಡು, ಧಾರವಾಡ, ಮಧುಗಿರಿ, ನಾಪೋಕ್ಲು, ಬಾಗಲಕೋಟೆ, ನಾಗಮಂಗಲ, ಕೊಪ್ಪ, ಚಿತ್ರದುರ್ಗ, ಮೈಸೂರು, ಸರಗೂರು, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆ ಮಳೆಯಾಘುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಜೋರು, ಆರೆಂಜ್​ ಅಲರ್ಟ್​

ಹೊನ್ನಾವರದಲ್ಲಿ 34.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪಣಂಬೂರಿನಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 34.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 – ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 24.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?