Karnataka Rains: ಬೆಂಗಳೂರಿಗೆ ಆರೆಂಜ್ ಅಲರ್ಟ್​, ಆಗಸ್ಟ್ 17ರವರೆಗೆ ಭಾರಿ ಮಳೆ ಸಾಧ್ಯತೆ

ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರಿಗೆ ಆರೆಂಜ್ ಅಲರ್ಟ್​, ಆಗಸ್ಟ್ 17ರವರೆಗೆ ಭಾರಿ ಮಳೆ ಸಾಧ್ಯತೆ
ಮಳೆ
Image Credit source: Reddit

Updated on: Aug 13, 2024 | 7:45 AM

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮಂಗಳವಾರ ಬೆಳಗಿನ ಜಾವ ಮಳೆಯಾಗಿದೆ, ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ

ರಾಯಲ್ಪಾಡು, ಬೆಂಗಳೂರು ನಗರ, ಕೊಳ್ಳೇಗಾಲ, ಸಿದ್ದಾಪುರ, ಹಗರಿಬೊಮ್ಮನಹಳ್ಳಿ, ದೇವನಹಳ್ಳಿ, ಗೋಕರ್ಣ, ಬಾಳೆಹೊನ್ನೂರು, ಹೊಸಕೋಟೆ, ಕ್ಯಾಸಲ್​ರಾಕ್, ಹುಣಸೂರು, ಗುಂಡ್ಲುಪೇಟೆ, ಆಗುಂಬೆ, ಭಾಗಮಂಡಲ, ರಾಮನಗರ, ಕೋಲಾರ, ಕೆಆರ್​ನಗರದಲ್ಲಿ ಮಳೆಯಾಗಿದೆ.

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us