Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಐದು ದಿನ ಭಾರಿ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಜುಲೈ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಹೆಚ್ಚು ಮಳೆ ಸುರಿಯುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ.

Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಐದು ದಿನ ಭಾರಿ ಮಳೆ
ಮಳೆ
Follow us
|

Updated on: Jul 05, 2024 | 7:50 AM

ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಲಿಂಗನಮಕ್ಕಿ, ಕದ್ರಾ, ಸಿದ್ದಾಫುರ, ಶೃಂಗೇರಿ, ಕುಂದಾಪುರ, ಮಂಕಿಯಲ್ಲಿ ಭಾರಿ ಮಳೆಯಾಗಿದೆ. ಕಾರ್ಕಳ, ಶಿರಾಲಿ, ಭಾಗಮಂಡಲ, ಕುಮಟಾ, ಹೊನ್ನಾವರ, ಕೊಪ್ಪ, ಜಯಪುರ, ಹುಂಚದಕಟ್ಟೆ, ಕೊಟ್ಟಿಗೆಹಾರ, ಗೋಕರ್ಣ, ಧರ್ಮಸ್ಥಳ, ಲೋಂಡಾ, ಕಳಸ, ಕೋಟ, ಯಲ್ಲಾಪುರ, ಬೆಳ್ತಂಗಡಿ, ತ್ಯಾಗರ್ತಿ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ

ಸುಳ್ಯ, ಎನ್​ಆರ್​ಪುರ, ನಾಪೊಕ್ಲು, ಬಾಳೆಹೊನ್ನೂರು, ಮಾಣಿ, ಮಂಗಳೂರು, ಸೋಮವಾರಪೇಟೆ, ಪುತ್ತೂರು, ಕಾರವಾರ, ಪಣಂಬೂರು, ಪೊನ್ನಂಪೇಟೆ, ಅಜ್ಜಂಪುರ, ಹಳಿಯಾಳ, ಮುಲ್ಕಿ, ಕಲಘಟಗಿ, ಚಿಂತಾಮಣಿ, ತರೀಕೆರೆ, ಕುಶಾಲನಗರ, ಮಾಗಡಿ, ಯುಗಟಿ, ಕುಂದಗೋಳ, ಬೇಲೂರು, ಅರಕಲಗೂಡು, ತುಮಕೂರು, ಮದ್ದೂರು, ಭದ್ರಾವತಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್