ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಲಿಂಗನಮಕ್ಕಿ, ಕದ್ರಾ, ಸಿದ್ದಾಫುರ, ಶೃಂಗೇರಿ, ಕುಂದಾಪುರ, ಮಂಕಿಯಲ್ಲಿ ಭಾರಿ ಮಳೆಯಾಗಿದೆ. ಕಾರ್ಕಳ, ಶಿರಾಲಿ, ಭಾಗಮಂಡಲ, ಕುಮಟಾ, ಹೊನ್ನಾವರ, ಕೊಪ್ಪ, ಜಯಪುರ, ಹುಂಚದಕಟ್ಟೆ, ಕೊಟ್ಟಿಗೆಹಾರ, ಗೋಕರ್ಣ, ಧರ್ಮಸ್ಥಳ, ಲೋಂಡಾ, ಕಳಸ, ಕೋಟ, ಯಲ್ಲಾಪುರ, ಬೆಳ್ತಂಗಡಿ, ತ್ಯಾಗರ್ತಿ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ
ಸುಳ್ಯ, ಎನ್ಆರ್ಪುರ, ನಾಪೊಕ್ಲು, ಬಾಳೆಹೊನ್ನೂರು, ಮಾಣಿ, ಮಂಗಳೂರು, ಸೋಮವಾರಪೇಟೆ, ಪುತ್ತೂರು, ಕಾರವಾರ, ಪಣಂಬೂರು, ಪೊನ್ನಂಪೇಟೆ, ಅಜ್ಜಂಪುರ, ಹಳಿಯಾಳ, ಮುಲ್ಕಿ, ಕಲಘಟಗಿ, ಚಿಂತಾಮಣಿ, ತರೀಕೆರೆ, ಕುಶಾಲನಗರ, ಮಾಗಡಿ, ಯುಗಟಿ, ಕುಂದಗೋಳ, ಬೇಲೂರು, ಅರಕಲಗೂಡು, ತುಮಕೂರು, ಮದ್ದೂರು, ಭದ್ರಾವತಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ