Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ, ಆರೆಂಜ್, ಯೆಲ್ಲೋ ಅಲರ್ಟ್​

ಕರಾವಳಿಯಿಂದ ಉತ್ತರ ಒಳನಾಡಿಗೆ ಮಳೆ ಶಿಫ್ಟ್​ ಆಗುತ್ತಿದೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಯಲ್ಪಾಡು, ತಾಳಿಕೋಟೆ, ಸಿಂಧನೂರು, ಮಿಡಿಗೇಶಿ, ಹುಂಚದಕಟ್ಟೆ, ಚಿಂತಾಮಣಿ, ಸೋಮವಾರಪೇಟೆ, ಪಾವಗಡ, ಪೊನ್ನಂಪೇಟೆ, ಕೂಡಲಸಂಗಮ, ಮಸ್ಕಿ, ಮುದ್ದೇಬಿಹಾಳ, ಮಧುಗಿರಿ, ಭಾಗಮಂಡಲ, ಅಡಕಿ, ಬಸವನ ಬಾಗೇವಾಡಿ, ಕೋಲಾರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಕುಡತಿನಿಯಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ, ಆರೆಂಜ್, ಯೆಲ್ಲೋ ಅಲರ್ಟ್​
ಮಳೆ
Image Credit source: Hindustan

Updated on: Aug 14, 2024 | 7:32 AM

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಯಾದಗಿರಿ, ಕೋಲಾರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
ರಾಯಲ್ಪಾಡು, ತಾಳಿಕೋಟೆ, ಸಿಂಧನೂರು, ಮಿಡಿಗೇಶಿ, ಹುಂಚದಕಟ್ಟೆ, ಚಿಂತಾಮಣಿ, ಸೋಮವಾರಪೇಟೆ, ಪಾವಗಡ, ಪೊನ್ನಂಪೇಟೆ, ಕೂಡಲಸಂಗಮ, ಮಸ್ಕಿ, ಮುದ್ದೇಬಿಹಾಳ, ಮಧುಗಿರಿ, ಭಾಗಮಂಡಲ, ಅಡಕಿ, ಬಸವನ ಬಾಗೇವಾಡಿ, ಕೋಲಾರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಕುಡತಿನಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ

ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us