Karnataka Rains: ಜುಲೈ 5ರ ಬಳಿಕ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಮಳೆ ಪ್ರಮಾಣ
ಈಗಾಗಲೇ ಮುಂಗಾರು ಆರಂಭವಾಗಿದೆ, ಮೊದ ಮೊದಲು ಮಳೆ ಕಡಿಮೆಯಿದ್ದರೂ ಕಳೆದ ಒಂದು ವಾರದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಜುಲೈ 05ರಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸಿದ್ದಾಪುರ, ಪುತ್ತೂರು, ಕದ್ರಾ, ಸೋಮವಾರಪೇಟೆ, ಬೆಳ್ತಂಗಡಿ, ಉಪ್ಪಿನಂಗಡಿ, ಧರ್ಮಸ್ಥಳ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 05ರ ಬಳಿಕ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ವಿರಾಜಪೇಟೆ, ಭಾಗಮಂಡಲ, ಆಗುಂಬೆ, ಸಿದ್ದಾಪುರ, ಕಮ್ಮರಡಿ, ಕುಂದಾಪುರ, ಸಿದ್ದಾಪುರ, ಪುತ್ತೂರು, ಕದ್ರಾ, ಸೋಮವಾರಪೇಟೆ, ಮಂಕಿ, ಬೆಳ್ತಂಗಡಿ, ಲೋಂಡಾ, ಕೊಟ್ಟಿಗೆಹಾರ, ನಾಪೋಕ್ಲು, ಪೊನ್ನಂಪೇಟೆ, ಹುಂಚದಕಟ್ಟೆ, ಮಾಣಿ, ಮಂಗಳೂರು, ಹಾರಂಗಿ, ಗೇರುಸೊಪ್ಪ, ಶಿರಾಲಿ, ಕೋಟ, ಕಲಬುರಗಿ, ಕೋಣನೂರು, ಕುಶಾಲನಗರ, ಎನ್ಆರ್ಪುರ, ಕಾರವಾರ, ಕಾರ್ಕಳ, ಜೇವರ್ಗಿ, ಬಂಡೀಪುರ, ಕಳಸ, ಸುಳ್ಯ, ಗದಗ, ಸೇಡಂ, ಬಂಡೀಪುರ, ಕಳಸ, ಬನವಾಸಿಯಲ್ಲಿ ಮಳೆಯಾಗಿದೆ.
ಮುಲ್ಕಿ, ಶಾಹಪುರ, ಸೈದಾಪುರ, ಭಾಲ್ಕಿ, ಬೀದರ್, ಸಂಕೇಶ್ವರ, ತರೀಕೆರೆ, ಭದ್ರಾವತಿ, ಹುಣಸೂರು, ಸರಗೂರು, ಅಜ್ಜಂಪುರ, ಬೇಗೂರು, ಆನವಟ್ಟಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 27.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಮುಂದಿನ 4 ದಿನ ರಣಭೀಕರ ಮಳೆ
ಹೊನ್ನಾವರ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಏರ್ಪೋರ್ಟ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ