Karanataka Weather: ಕರ್ನಾಟಕದಾದ್ಯಂತ ಮಳೆಯೋ ಮಳೆ, 6 ಜಿಲ್ಲೆಗಳಿಗೆ ಆರೆಂಜ್, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುತ್ತಿದೆ. ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಅಕ್ಟೋಬರ್ 11: ಕರ್ನಾಟಕದಲ್ಲಿ ವಿಪರೀತ ಮಳೆ(Rain)ಯಾಗುತ್ತಿದೆ. ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಇತರೆಡೆ ಮಳೆ ಹೆಚ್ಚಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.
ಎಲ್ಲೆಲ್ಲಿ ಮಳೆಯಾಗಿದೆ? ಮದ್ದೂರು, ಚಿಂತಾಮಣಿ, ಚನ್ನಗಿರಿ, ಹುಣಸೂರು, ಸಿರಾ, ತಿಪಟೂರು, ಚನ್ನರಾಯಪಟ್ಟಣ, ಗೇರುಸೊಪ್ಪ, ಕೃಷ್ಣರಾಜಪೇಟೆ, ನಂಜನಗೂಡು, ಅರಕಲಗೂಡು, ಎಚ್ಡಿ ಕೋಟೆ, ಕನಕಪುರ, ಕೃಷ್ಣರಾಜಸಾಗರ, ಮೈಸೂರು, ಎನ್ಆರ್ಪುರ, ನಾಗಮಂಗಲ, ತರೀಕೆರೆ, ಯಗಟಿ, ಕೋಲಾರ, ಅಜ್ಜಂಪುರದಲ್ಲಿ ಮಳೆಯಾಗಿದೆ.
ಚಿಕ್ಕಬಳ್ಳಾಪುರ, ಕೊಪ್ಪ, ಎಂಎಂಹಿಲ್ಸ್, ಮಧುಗಿರಿ, ಮಾಗಡಿ, ಸೈದಾಪುರ, ತ್ಯಾಗರ್ತಿ, ಬೇಲೂರು, ಚಾಮರಾಜನಗರ, ಗುಬ್ಬಿ, ಗುರುಮಿಟ್ಕಲ್, ಬನವಾಸಿ, ಧಾರವಾಡ, ಬೆಂಗಳೂರು ಕೆಐಎಎಲ್, ಹಿರಿಯೂರು, ಚಿತ್ರದುರ್ಗ, ಹೊಸಕೋಟೆ, ಜೋಯ್ಡಾ, ಜಯಪುರ, ಮೂಡುಬಿದಿರೆ, ನಾಪೋಕ್ಲು, ಕುಮಟಾ, ಪೊನ್ನಂಪೇಟೆ, ರಾಯಲ್ಪಾಡು, ಸಿದ್ದಾಪುರ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ,ಬೀದರ್ನಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗ್ಗೆಯವರೆಗೂ ಗುಡುಗು ಸಹಿತ ಮಳೆಯಾಗಿದೆ. ಎಚ್ಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್, ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಹೊನ್ನಾವರದಲ್ಲಿ 18.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿ ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.




