ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.
ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗಲಿದೆ. ಎಂಎಂ ಹಿಲ್ಸ್, ಬಂಡೀಪುರ, ಸಿದ್ದಾಪುರ, ಬೇಗೂರು, ಚಾಮರಾಜನಗರ, ಮೂರ್ನಾಡು, ಎಚ್ಡಿ ಕೋಟೆ, ಪುತ್ತೂರು, ಸುಳ್ಯ, ಕೃಷ್ಣರಾಜಪೇಟೆ, ಮೈಸೂರು, ಕುಶಾಲನಗರ, ಹುಣಸೂರು, ಹಾರಂಗಿ, ಮಂಗಳೂರು, ಸೋಮವಾರಪೇಟೆ, ಕನಕಪುರ, ಭಾಗಮಂಡಲ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆ ಬರುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕೊಡಗು, ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮೇ 28ರವರೆಗೂ ಮಳೆ
ಹೊನ್ನಾವರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗದಗದಲ್ಲಿ 35.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ